ಪುತ್ತೂರು: ಕಾರಣಿಕ ಪುರುಷರಾದ ಕೋಟಿ-ಚೆನ್ನಯೆ ಜನ್ಮ ಸ್ಥಾನವಾದ ಪಡುಮಲೆಯಲ್ಲಿ ಪಡುಮಲೆ ಕೋಟಿ ಚೆನ್ನಯರ ಜನ್ಮಸ್ಥಾನ ಸಂಚಲನ ಸೇವಾ ಟ್ರಸ್ಟ್ ಮೂಲಕ ಜೀರ್ಣೋದ್ಧಾರಗೊಂಡಿರುವ ನಾಗಬೆರ್ಮೆರಗುಡಿ, ತೀರ್ಥಬಾವಿ, ನಾಗಸನ್ನಿಧಿ, ರಕ್ತೇಶ್ವರಿ ಸಾನಿಧ್ಯ ಹಾಗೂ ದೇಯಿ ಬೈದೆದಿಯವರ ಸಮಾಧಿ ಸ್ಥಳಗಳ ಬ್ರಹ್ಮಕಲಶೋತ್ಸವ ಪೂರ್ವಭಾವಿ ಸಭೆಯು ದ.6ರಂದು ಬೆಳಿಗ್ಗೆ ಬಪ್ಪಳಿಗೆ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸಭಾಭವನದಲ್ಲಿ ನಡೆಯಲಿದೆ. ಸಭೆಯಲ್ಲಿ ಟ್ರಸ್ಟ್ನ ಗೌರವಾಧ್ಯಕ್ಷ ರುಕ್ಮಯ್ಯ ಪೂಜಾರಿ, ಆಡಳಿತ ಮೊಕ್ತೇಸರ ಚಲನಚಿತ್ರ ನಟ ವಿನೋದ್ ಆಳ್ವ, ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್ ಸಹಿತ ಎಲ್ಲಾ ಪದಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.