ಕಾವು: ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ಮಂಗಳೂರು ಕೊಡಮಾಡುವ 2019-20ನೇ ಸಾಲಿನ ತಾಲೂಕುವಾರು ಉತ್ತಮ ಗುಣಮಟ್ಟದ ಸಂಘ ಪ್ರಶಸ್ತಿಯು ಮಾಡ್ನೂರು ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಲಭಿಸಿದೆ. ದ.5ರಂದು ಮಂಗಳೂರಿನಲ್ಲಿ ನಡೆದ ದ.ಕ.ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಮಹಾಸಭೆಯಲ್ಲಿ ಒಕ್ಕೂಟದ ಅಧ್ಯಕ್ಷ ರವಿರಾಜ ಹೆಗ್ಡೆಯವರು ಪ್ರಶಸ್ತಿ ವಿತರಿಸಿದರು. ಮಾಡ್ನೂರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಕೃಷ್ಣಪ್ರಸಾದ್ ಕೊಚ್ಚಿ ,ಕಾರ್ಯದರ್ಶಿ ಬಾಲಕೃಷ್ಣ ಕೆದಿಲಾಯರವರು ಪ್ರಶಸ್ತಿ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಒಕ್ಕೂಟದ ನಿರ್ದೇಶಕರಾದ ಎಸ್.ಬಿ ಜಯರಾಮ ರೈ ಬಳಜ್ಜ, ನಾರಾಯಣ ಪ್ರಕಾಶ್ ರವರು ಉಪಸ್ಥಿತರಿದ್ದರು.