ಪುತ್ತೂರು: ಕೋವಿಡ್ ನಿಯಮಾವಳಿಯಂತೆ ಜಿಡೆಕಲ್ಲು ಸರಕಾರಿ ಹಿ.ಪ್ರಾ.ಶಾಲೆಯಲ್ಲಿ ನಡೆದ ಶಾಲಾರಂಭದಲ್ಲಿ ಮಕ್ಕಳನ್ನು ಬರಮಾಡಿಕೊಳ್ಳುವ ಸಂದರ್ಭ ಶಾಲಾ ಭೇಟಿ ಮಾಡಿದ ಕ್ಷೇತ್ರ ಶಿಕ್ಷಣಾಧಿಕಾರಿಗೆ ಅಲ್ಲಿನ ವಿದ್ಯಾರ್ಥಿಗಳು ಕೃತಜ್ಞತೆ ಸಲ್ಲಿಸಿದ ಉತ್ತಮ ವಿದ್ಯಾಮಾನ ನಡೆದಿದೆ. ಹೊಸ ವರುಷದ ಹುರುಪಿನೊಂದಿಗೆ ವಿದ್ಯಾರ್ಥಿಗಳು ಶಾಲೆಯ ಪ್ರಾರಂಭೋತ್ಸವದಲ್ಲಿ ಮೆರವಣಿಗೆ ಮೂಲಕ ಶಾಲೆಗೆ ಆಗಮಿಸಿದರು.ಮಾಸ್ಕ್ ಧರಿಸಿ, ಸ್ಯಾನಿಟೈಸರ್, ಥರ್ಮಲ್ ಸ್ಕ್ಯಾನರ್ ಪರೀಕ್ಷೆಗೊಳಪಟ್ಟ ಬಳಿಕ ವಿದ್ಯಾರ್ಥಿಗಳು ತರಗತಿ ಕೊಠಡಿಗೆ ಹೋದರು. ಇದೆಲ್ಲವನ್ನು ವೀಕ್ಷಣೆ ಮಾಡುತ್ತಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಲೋಕೇಶ್ ಅವರಲ್ಲಿಗೆ ಬಂದ ವಿದ್ಯಾರ್ಥಿಗಳ ಒಂದು ಗುಂಪು ಶಾಲೆಯನ್ನು ಪ್ರಾರಂಭಿಸಿದ್ದಕ್ಕಾಗಿ ನಿಮಗೆ ಧನ್ಯವಾದಗಳು ಎಂದು ಹೇಳಿದರು. ಈ ಸಂದರ್ಭದಲ್ಲಿ ದೈಹಿಕ ಶಿಕ್ಷಣ ಪರಿವೀಕ್ಷಕ ಸುಂದರ ಗೌಡ, ಮುಖ್ಯ ಶಿಕ್ಷಕ ತಾರಾನಾಥ ಪಿ, ಜುಲಿಯಾನವಾಸ್, ಪ್ರೇಮ ಕೆ.ಪಿ ಉಪಸ್ಥಿತರಿದ್ದರು.