HomePage_Banner
HomePage_Banner
HomePage_Banner
HomePage_Banner

ಶಾಂತಿಮೊಗರು ಕುಮಾರಧಾರ ನದಿಯಲ್ಲಿ ಕಿಂಡಿ ಅಣೆಕಟ್ಟು ನಿರ್ಮಾಣ ಕಾಮಗಾರಿ ಪುನಾರಂಭ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಕಾಣಿಯೂರು: ಬಹುಗ್ರಾಮ ಕುಡಿಯುವ ನೀರಿನ ಯೊಜನೆ ಸಲುವಾಗಿ.  ಕಡಬ ತಾಲೂಕಿನ  ಶಾಂತಿಮೊಗರು ಬಳಿ  ಕುಮಾರಧಾರಾ ನದಿಯಲ್ಲಿ  ಕಿಂಡಿ ಅಣೆಕಟ್ಟು ನಿರ್ಮಾಣ ಕಾಮಗಾರಿ  ಪುನರಾರಂಭ ಗೊಂಡಿದೆ.


ಕಡಬ ತಾಲೂಕಿನ ಕುದ್ಮಾರು, ಸವಣೂರು, ಬೆಳಂದೂರು, ಕಾಣಿಯೂರು, ಪುಣ್ಚಪ್ಪಾಡಿ, ಆಲಂಕಾರು, ಪೆರಾಬೆ, ಕುಂತೂರು ಗ್ರಾಮ ಗಳಿಗೆ ಕುಡಿಯುವ ನೀರು ಸರಬರಾಜು ಮಾಡುವ ಉದ್ದೇಶ ಹೊಂದಲಾಗಿದೆ. ಈ ಯೋಜನೆಯು 2021ರ  ಮೇ ತಿಂಗಳೊಳಗೆ ಪೂರ್ಣಗೊಳ್ಳುವ ನಿರೀಕ್ಷೆ ಹೊಂದಲಾಗಿದೆ.

ಶಾಸಕ ಎಸ್. ಅಂಗಾರ ರವರು  ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಯ ಮುಖಾಂತರ ಯೋಜನೆಗೆ 7.5 ಕೋಟಿ ರೂ. ಅನುದಾನ  ಒದಗಿಸಿದ್ದು, ಪಶ್ಚಿಮ ವಾಹಿನಿ ಯೋಜನೆಯಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳಲಾಗಿತ್ತು. ಈ ಕಿಂಡಿ ಅಣೆಕಟ್ಟೆ ನಿರ್ಮಾಣವಾದರೆ ನದಿ ಪಾತ್ರದ ಎರಡು ಭಾಗದ ಮೂರು ಕಿ.ಮೀ. ಸುತ್ತಳತೆಯಲ್ಲಿ ಅಂತರ್ಜಲ ವೃದ್ಧಿಯಾಗಲಿದೆ. ಎರಡು ವರ್ಷಗಳ ಹಿಂದೆ ಕಾಮಗಾರಿ ಆರಂಭಗೊಂಡು ತಳಪಾಯದ ಕೆಲಸ ನಡೆದಿತ್ತು 2020ರೊಳಗೆ ಕಾಮಗಾರಿ ಮುಗಿಸಲು ಅವಧಿ ನಿಗದಿಯಾಗಿತ್ತು.  ಆದರೆ  ನದಿ ನೀರಿನ ಹರಿವಿನ ಪ್ರಮಾಣ ಕಡಿಮೆ ಆಗದ ಕಾರಣ ಕಾಮಗಾರಿ ಕೂಡ ನಿರೀಕ್ಷಿತ ಪ್ರಮಾಣದಲ್ಲಿ ಸಾಗಿರಲಿಲ್ಲ. ಈಗ ಮತ್ತೆ ಕಾಮಗಾರಿ ಪ್ರಾರಂಭಗೊಂಡಿದ್ದು, ಒಂದು ಭಾಗದಲ್ಲಿ ಪಿಲ್ಲರ್ ಅಳವಡಿಕೆಗೆ ಪೂರಕವಾಗಿ ಯಂತ್ರ ಗಳಿಂದ ಅಗೆತ, ನೀರಿನ ಹರಿವು ತಡೆಗಟ್ಟಲು ಮಣ್ಣಿನ ಕಟ್ಟದ ಕಾಮಗಾರಿ ಪ್ರಗತಿಯಲ್ಲಿದೆ.


೭.೫ ಕೋಟಿ ರೂ ಯೋಜನೆ:

ಕುಡಿಯುವ ನೀರಿನ ಭವಣೆ ನೀಗಿಸಬೇಕೆನ್ನುವ ಉದ್ದೇಶದಿಂದ ಸುಳ್ಯ ಶಾಸಕ ಎಸ್.ಅಂಗಾರ ಅವರ ಶಿಪಾರಸ್ಸಿನಂತೆ ಈ ಕಿಂಡಿ ಅಣೆಕಟ್ಟು ಯೋಜನೆಗೆ ೭.೫ ಕೋಟಿ ರೂ ಮಂಜೂರುಗೊಂಡಿದ್ದು, ನದಿಯ ತಳಮಟ್ಟದಿಂದ ನಾಲ್ಕು ಮೀಟರ್ ಎತ್ತರದಲ್ಲಿ ನಿರ್ಮಾಣವಾಗುತ್ತಿರುವ ಈ ಅಣೆಕಟ್ಟು ೨೨೧ ಮೀಟರ್ ಉದ್ದ ಹಾಗೂ ಮೂರು ಮೀಟರ್ ಅಗಲ ವಿರುತ್ತದೆ. ಐವತ್ತಾರು ಕಿಂಡಿಗಳನ್ನು ನಿರ್ಮಾಣ ಮಾಡಲಾಗುತ್ತದೆ. ಇದರಲ್ಲಿ ಸುಮಾರು ೧೮.೫೬ ಎಮ್‌ಸಿಎಫ್‌ಟಿ ನೀರು ಶೇಖರಣೆಯಾಗಲಿದೆ. ದಶಂಬರ್ ಆರಂಭದಿಂದ ನದಿಯ ನೀರಿನ ಮಟ್ಟವನ್ನು ನೋಡಿಕೊಂಡು ಹಲಗೆಗಳನ್ನು ಕಿಂಡಿಗಳಿಗೆ ಜೋಡನೆ ಮಾಡಲಾಗುತ್ತದೆ, ಯಥಾ ಪ್ರಕಾರ ಮಳೆಗಾಲ ಪ್ರಾರಂಭವಾಗಿ ನದಿಯಲ್ಲಿ ನೀರಿನ ಮಟ್ಟ ಜಾಸ್ತಿಯಾಗುತ್ತಿದ್ದಂತೆ ಹಲಗೆಗಳನ್ನು ತೆಗೆದು ಬಿಡಲಾಗುತ್ತದೆ. ಮಳೆಗಾಲದಲ್ಲಿ ನದಿಯನ್ನು ಯಾವುದೇ ಅಡೆತಡಗಳಿಲ್ಲದೆ ಹರಿಯಬಿಡಲಾಗುತ್ತದೆ. ಇದು ಯೋಜನೆಯ ಕಾಮಗಾರಿ ಮುಗಿದ ಬಳಿಕ ಆಗಲಿರುವ ವಿಧಾನ. ಈ ಕಿಂಡಿ ಅಣೆಕಟ್ಟೆ ನಿರ್ಮಾಣವಾದರೆ ನದಿಯ ಇಕ್ಕೆಳೆಗಳಲ್ಲಿ ಸುಮಾರು ಎರಡರಿಂದ ಮೂರು ಕಿಲೋ ಮೀಟರ್ ಸುತ್ತಳತೆಯಲ್ಲಿ ಅಂತರ್ಜಳ ವೃದ್ಧಿಯಾಗಲಿದೆ, ಕೃಷಿಕರ ಕೊಳವೆಬಾವಿ, ಕುಡಿಯುವ ನೀರಿನ ಬಾವಿ ಹಾಗೂ ಕೆರೆಗಳಲ್ಲಿ ಬಿರು ಬೇಸಿಗೆಯಲ್ಲೂ ಸಾಕಷ್ಟು ನೀರು ತುಂಬಿ ತುಳುಕಲಿದೆ. ಕೃಷಿ ಭೂಮಿಗೆ ನೀರುಣಿಸಲು ಪರದಾಡುತ್ತಿರುವ ಈ ಭಾಗದ ಕೃಷಿಕರಿಗೆ ಜಲನಿಧಿ ಒಲಿಯಲಿದೆ. ಈ ಅಣೆಕಟ್ಟೆಯನ್ನು ಕುಡಿಯುವ ನೀರಿಗಾಗಿ ಬಳಕೆ ಮಾಡುವ ಉದ್ದೇಶವಿರುವುದರಿಂದ ಪೈಪುಲೈನ್ ಮೂಲಕ ಶಾಂತಿಮೊಗರುವಿನ ಆಸು ಪಾಸಿನ ಕುದ್ಮಾರು, ಸವಣೂರು, ಬೆಳಂದೂರು, ಕಾಣಿಯೂರು, ಪುಣ್ಚಪ್ಪಾಡಿ, ಪಾಲ್ತಾಡಿ, ಇತ್ತ ಆಲಂಕಾರು, ಪೆರಾಬೆ, ಕುಂತೂರು ಗ್ರಾಮಗಳಿಗೆ ನೀರು ಸರಬರಾಜು ಮಾಡಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯನ್ನು ಅನುಷ್ಟಾನ ಮಾಡುವುದು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.