HomePage_Banner
HomePage_Banner
HomePage_Banner
HomePage_Banner

ಮಿಶನ್‌ಮೂಲೆ-ಮೊಟ್ಟೆತ್ತಡ್ಕ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ, ಮಹಾ ಚಂಡಿಕಾಯಾಗ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಕೆಮ್ಮಿಂಜೆ ಗ್ರಾಮದ ಮಿಶನ್‌ಮೂಲೆ-ಮೊಟ್ಟೆತ್ತಡ್ಕ ಶ್ರೀ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ್ ತಂತ್ರಿಗಳ ನೇತೃತ್ವದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವದ ಅಂಗವಾಗಿ ಶ್ರೀ ಕ್ಷೇತ್ರದಲ್ಲಿ ಮಹಾ ಚಂಡಿಕಾಯಾಗವು ಜ.೨ ರಂದು ಜರಗಿತು.

ಬೆಳಿಗ್ಗೆ ದೇವತಾ ಪ್ರಾರ್ಥನೆ, ಆಚಾರ್ಯವರಣ, ಸ್ವಸ್ತಿ ಪುಣ್ಯಾಹವಾಚನ, ಮಹಾಗಣಪತಿ ಹೋಮ, ಚಂಡಿಕಾಯಾಗ, ಕಲಶ ಪೂಜೆ ಪ್ರಾರಂಭಗೊಂಡಿತು. ಪೂರ್ವಾಹ್ನ ಚಂಡಿಕಾಯಾಗದ ಪೂರ್ಣಾಹುತಿ, ನಾಗದೇವರಲ್ಲಿ ತಂಬಿಲ ಸೇವೆ, ದೈವಗಳಿಗೆ ತಂಬಿಲ, ಮಧ್ಯಾಹ್ನ ದೇವರಿಗೆ ಕಲಶಾಭಿಷೇಕ, ಮಹಾ ಮಂಗಳಾರತಿ, ಪ್ರಸಾದ ವಿತರಣೆ, ಅನ್ನಸಂರ್ಪಣೆ ಜರಗಿತು. ಅದೇ ದಿನ ಶನಿವಾರ ಬೆಳಿಗ್ಗೆ ಸೂರ್ಯೋದಯದಿಂದ ಸಂಜೆ ಸೂರ್ಯಾಸ್ತದವರೆಗೆ ಅರ್ಧ ಏಕಾಹ ಭಜನೆ ಹಾಗೂ ಸಂಜೆ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆಯು ನೆರವೇರಿತು.

ವಿವಿಧ ಭಜನಾ ಮಂಡಳಿಗಳಾದ ಕುಂಬ್ರ ಶ್ರೀರಾಮ ಮಹಿಳಾ ಭಜನಾ ಮಂಡಳಿ, ಪಾಲಿಂಜೆ ಮಹಾವಿಷ್ಣು ಮಹಿಳಾ ಭಜನಾ ಮಂಡಳಿ, ಕೆಮ್ಮಿಂಜೆ ಶ್ರೀರಾಮ ಮಹಿಳಾ ಭಜನಾ ಮಂಡಳಿ, ಪುತ್ತೂರು ಶ್ರೀ ಮಹಾಲಿಂಗೇಶ್ವರ ಮಹಿಳಾ ಭಜನಾ ಮಂಡಳಿ, ಮುಕ್ರಂಪಾಡಿ ಸುಭದ್ರ ಮಹಿಳಾ ಮಂಡಳಿ, ಸವಣೂರು ಮುಗೇರು ಶ್ರೀ ಮಹಾವಿಷ್ಣು ಭಜನಾ ಮಂಡಳಿ, ಮೊಟ್ಟೆತ್ತಡ್ಕ ಚಾಮುಂಡೇಶ್ವರಿ ಭಜನಾ ಮಂಡಳಿಯ ಸದಸ್ಯರು ಭಜನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

ಈ ಪುಣ್ಯ ಕಾರ್ಯದಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರ ಕೆ.ಮೋಹನ್ ರೈ ಮಿಶನ್‌ಮೂಲೆ, ಅಧ್ಯಕ್ಷ ಕೆ.ವೇಣುಗೋಪಾಲ ಗೌಡ, ಕಾರ್ಯದರ್ಶಿ ಕೆ.ಬಿ ಶೇಖರ್, ಉಪಾಧ್ಯಕ್ಷ ರಾಮ ಶೆಟ್ಟಿ, ಜೊತೆ ಕಾರ್ಯದರ್ಶಿ ಲಕ್ಷ್ಮಣ ಶೆಟ್ಟಿ, ಕೋಶಾಧಿಕಾರಿ ಮೋಹನ್ ಕುಮಾರ್, ಲೆಕ್ಕಪರಿಶೋಧಕರಾದ ಬಿ.ವಿಶ್ವನಾಥ್ ರೈಯವರು ಸೇರಿದಂತೆ ನೂರಾರು ಭಕ್ತರು ಪಾಲ್ಗೊಂಡು, ಶ್ರೀ ದೇವಿಯ ಪ್ರಸಾದವನ್ನು ಸ್ವೀಕರಿಸಿ, ಶ್ರೀ ಚಾಮುಂಡೇಶ್ವರಿ ದೇವಿಯ ಕೃಪೆಗೆ ಪಾತ್ರರಾದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.