HomePage_Banner
HomePage_Banner
HomePage_Banner
HomePage_Banner

ಡಿ.ವಿ.ಸದಾನಂದ ಗೌಡ ಅಸ್ವಸ್ಥ: ಚಿತ್ರದುರ್ಗದಲ್ಲಿ ಆಸ್ಪತ್ರೆಗೆ ದಾಖಲು

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡರವರು ಅಸ್ವಸ್ಥಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿತ್ರದುರ್ಗದ ನವಿನ್ ರೆಸಿಡೆನ್ಸಿ‌ ಬಳಿ ಕಾರಿನಿಂದ ಇಳಿಯುವಾಗ ಕುಸಿದು ಬಿದ್ದ ಪುತ್ತೂರಿನ ಮಾಜಿ ಶಾಸಕರೂ, ಮಾಜಿ ಮುಖ್ಯಮಂತ್ರಿಗಳೂ ಕೇಂದ್ರ ಸಚಿವರೂ ಆಗಿರುವ ಸದಾನಂದ ಗೌಡರನ್ನು ಭದ್ರತಾ ಸಿಬ್ವಂದಿಗಳು ಕೂಡಲೇ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಶಿವಮೊಗ್ಗದಲ್ಲಿ ನಡೆದ ಬಿಜೆಪಿ ರಾಜ್ಯ ಕಾರ್ಯಕಾರಿಣಿಯಲ್ಲಿ ಭಾಗವಹಿಸಿ ಚಿತ್ರದುರ್ಗಕ್ಕೆ ತೆರಳಿದ್ದ ಸದಾನಂದ ಗೌಡರವರು ಶುಗರ್ ಲೋ ಆಗಿ ಅಸ್ವಸ್ಥರಾಗಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ. ಸದಾನಂದ ಗೌಡರವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಚಿತ್ರದುರ್ಗದಿಂದ ಬೆಂಗಳೂರಿಗೆ ಏರ್ ಆಂಬುಲೆನ್ಸ್ ಮೂಲಕ ಕರೆ ತರಲು ಸಿದ್ಧತೆ ನಡೆದಿದೆ ಎಂದು ತಿಳಿದು ಬಂದಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.