ವಿಟ್ಲ: ಇಲ್ಲಿನ ಮೇಗಿನ ಪೇಟೆಯಲ್ಲಿರುವ ವಿಟ್ಲ ವಲಯ ಎಸ್.ಡಿ.ಪಿ.ಐ ಕಚೇರಿಯ ಬಾಗಿಲಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಘಟನೆ ಜ.4ರಂದು ಬೆಳಗ್ಗೆ ಬೆಳಕಿಗೆ ಬಂದಿದೆ.
ಡಿ.3ರ ರಾತ್ರಿ ಕಿಡಿಗೇಡಿಗಳು ಕೃತ್ಯ ನಡೆಸಿರುವುದಾಗಿ ಶಂಕಿಸಲಾಗಿದೆ. ಘಟನಾ ಸ್ಥಳದಲ್ಲಿ ಕಾಲಿ ಪೈಂಟ್ ಡಬ್ಬಗಳು ಪತ್ತೆಯಾಗಿದ್ದು, ಬಾಗಿಲಿಗೆ ಪೈಂಟ್ ಸುರಿದು ಬೆಂಕಿ ಹಚ್ಚಿರುವುದಾಗಿ ಶಂಕಿಸಲಾಗಿದೆ. ಘಟನಾ ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ಆಗಮಿಸಿ ಮಾಹಿತಿ ಸಂಗ್ರಹಿಸಿದ್ದಾರೆ. ಘಟನೆಯನ್ನು ಖಂಡಿಸಿ, ಆರೋಪಿಗಳ ಶೀಘ್ರ ಬಂಧನಕ್ಕೆ ಆಗ್ರಹಿಸಿ ಮೇಗಿನ ಪೇಟೆಯ ಕಚೇರಿಯ ಮುಂಭಾಗದಲ್ಲಿ ಕಾರ್ಯಕರ್ತರಿಂದ ಪ್ರತಿಭಟನೆ ನಡೆಯಿತು.