ಪುತ್ತೂರು: ಉಳ್ಳಾಲ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನ, ಕುರಿಯ-ಪುತ್ತೂರು ಇದರ ಆಶ್ರಯದಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮಂಗಳೂರು ಇದರ ಪುತ್ತೂರು ಘಟಕದ ಚತುರ್ಥ ವಾರ್ಷಿಕ ಸಮಾರಂಭವು ಜ.4ರಂದು ಸಂಜೆ ಉಳ್ಳಾಲ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನ ಕುರಿಯ-ಪುತ್ತೂರು ಇಲ್ಲಿನ ಸಾಂಸ್ಕೃತಿಕ ವೇದಿಕೆಯಲ್ಲಿ ಜರಗಿತು.
ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕರೂ, ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ನ ಪುತ್ತೂರು ಘಟಕದ ಗೌರವಾಧ್ಯಕ್ಷರೂ ಆಗಿರುವ ಕೆ.ಸೀತಾರಾಮ ರೈ ಸವಣೂರುರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮಂಗಳೂರು ಜಾಗತಿಕ ಬಂಟ ಪ್ರತಿಷ್ಠಾನದ ಯೋಜನಾ ನಿರ್ದೇಶಕರಾದ ಡಾ.ಬೂಡಿಯಾರು ಸಂಜೀವ ರೈಯವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಗೌರವ ಉಪಸ್ಥಿತಿಯಾಗಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ನ ಸ್ಥಾಪಕಾಧ್ಯಕ್ಷ ಹಾಗೂ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯಸ್ವಾಮಿ ಕ್ರಪಾ ಪೋಷಿತ ಯಕ್ಷಗಾನ ಮಂಡಳಿ ನಾಗವೃಜ ಕ್ಷೇತ್ರ ಪಾವಂಜೆ ಇದರ ಸಂಚಾಲಕರಾದ ಪಟ್ಲ ಸತೀಶ್ ಶೆಟ್ಟಿ, ಕುರಿಯ ಉಳ್ಳಾಲ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಆಡಳಿತಾಧಿಕಾರಿ ಹರೀಶ್ ಪಿ, ಕುರಿಯ ಉಳ್ಳಾಲ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಪ್ರಧಾನ ಅರ್ಚಕ ಪ್ರಕಾಶ್ ರಾವ್ ಕೊಡ್ಲಾರು, ಕುರಿಯ ಉಳ್ಳಾಲ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷರಾದ ರವೀಂದ್ರನಾಥ ರೈ ಕೆ.ಎಸ್ ಬಳ್ಳಮಜಲುಗುತ್ತು ಹಾಗೂ ಸತೀಶ್ ರೈ ಡಿಂಬ್ರಿಗುತ್ತುರವರು ಭಾಗವಹಿಸಿದರು. ಹಾಗೂ ರಾತ್ರಿ ಗಂಟೆ ಎಂಟರಿಂದ ರಂಗಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ಜರಗಲಿದೆ.
ಕಾರ್ಯಕ್ರಮದ ನೇರಪ್ರಸಾರಕ್ಕೆ ಈ ಕೆಳಗಿನ ಲಿಂಕ್ ನ್ನು ಕ್ಲಿಕಿಸಿ