ಪುತ್ತೂರು: ಬರೇ ಹೊಂಡ ಗುಂಡಿಗಳಿಂದ ತುಂಬಿರುವ ಕರ್ನೂರು ಗಾಳಿಮುಖ ರಸ್ತೆ ಜ.04ರಂದು ಸಂಜೆ ಸುರಿದ ಅನಿರೀಕ್ಷಿತ ಮಳೆಗೆ ಸಂಪೂರ್ಣ ಕೆಸರುಮಯವಾಗಿದೆ. ಹೊಂಡಗಳಲ್ಲಿ ನೀರು ತುಂಬಿಕೊಂಡಿದ್ದು ವಾಹನ ಸವಾರರಿಗೆ, ಪಾದಚಾರಿಗಳಿಗೆ ಸಂಕಷ್ಟ ತಂದಿದೆ. ಈಶ್ವರಮಂಗಲದ ಮೂಲಕ ಕರ್ನೂರು ಗಾಳಿಮುಖವಾಗಿ ಕಾಸರಗೋಡು ಜಿಲ್ಲೆಯನ್ನು ಸಂಪರ್ಕಿಸುವ ಅಂತರರಾಜ್ಯ ಸಂಪರ್ಕ ರಸ್ತೆ ಇದಾಗಿದೆ. ಕರ್ನೂರು ನಿಂದ ಗಾಳಿಮುಖ ತನಕ ರಸ್ತೆ ಸಂಪೂರ್ಣ ಹದಗೆಟ್ಟಿದ್ದು ಹೊಂಡ ಗುಂಡಿಗಳು ನಿರ್ಮಾಣಗೊಂಡಿದೆ. ಮಳೆ ಬಂದಿದ್ದರಿಂದ ರಸ್ತೆಯ ಗುಂಡಿಗಳಲ್ಲಿ ನೀರು ತುಂಬಿಕೊಂಡಿದ್ದು ದ್ವಿಚಕ್ರ ವಾಹನ ಸವಾರರು ಪರದಾಡಬೇಕಾದ ಪರಿಸ್ಥಿತಿ ನಿರ್ಮಾಣಗೊಂಡಿದೆ. ರಸ್ತೆ ಅಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡಲಾಗುತ್ತದೆ ಎಂದು ಹೇಳಿಕೊಂಡಿದ್ದರೂ ಇದುವರೇಗೆ ಯಾವುದೇ ಅಭಿವೃದ್ಧಿಯಾಗಿಲ್ಲ ಎನ್ನುತ್ತಾರೆ ಸ್ಥಳೀಯರು. ರಸ್ತೆಯಲ್ಲಿ ಅಗಲ ಕಿರಿದಾದ ಸೇತುವೆಗಳಿದ್ದು ಘನ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಆದ್ದರಿಂದ ಈ ಕೂಡಲೇ ರಸ್ತೆ ದುರಸ್ತಿ ಮಾಡಿಕೊಡಬೇಕು ಎನ್ನುವುದು ಈ ಭಾಗದ ವಾಹನ ಸವಾರರ, ಸಾರ್ವಜನಿಕರ ಮನವಿಯಾಗಿದೆ.