HomePage_Banner
HomePage_Banner
HomePage_Banner
HomePage_Banner

ಬಿಜೆಪಿ ಸರಕಾರದ ಭ್ರಷ್ಟಾಚಾರ ಬಯಲಿಗೆ ಎಳೆಯಲು ಕಾಂಗ್ರೆಸ್ ಸನ್ನದ್ಧ -ಸೇವಾದಳದ ರಾಜ್ಯಾಧ್ಯಕ್ಷೆ ಪ್ಯಾರಿಜಾನ್

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1


ಪುತ್ತೂರು: ಕೇಂದ್ರ ಹಾಗೂ ರಾಜ್ಯದ ಬಿಜೆಪಿ ಸರಕಾರವು ಭ್ರಷ್ಟಾಚಾರದಲ್ಲಿ ತೊಡಗಿದ್ದು ೬ವರ್ಷದಲ್ಲಿ ಕೇಂದ್ರ ಸರಕಾರವು ಇಡೀ ದೇಶವನ್ನೇ ಮಾರಾಟ ಮಾಡಲು ಹೊರಟಿದೆ ಎಂದು ಜನರಿಗೆ ಈ ವಿಷಯವನ್ನು ತಿಳಿಸಲು ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ ಶಿವಕುಮಾರ್‌ರವರು ಸನ್ನದ್ಧರಾಗಿದ್ದಾರೆಂದು ಕರ್ನಾಟಕ ರಾಜ್ಯ ಪ್ರದೇಶ ಕಾಂಗ್ರೆಸ್ ಸೇವಾದಳದ ರಾಜ್ಯಾಧ್ಯಕ್ಷೆ ಪ್ಯಾರಿಜಾನ್ ಮೈಸೂರುರವರು ಜ. ೬ರಂದು ಪುತ್ತೂರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಹೇಳಿದರು. ಬಂಟ್ವಾಳದಲ್ಲಿ ಜ. ೬ರಂದು ನಡೆದ ಮೈಸೂರು ವಿಭಾಗ ಮಟ್ಟದ ಕಾಂಗ್ರೆಸ್ ಪ್ರತಿನಿಧಿಗಳ ಸಮಾವೇಶದಲ್ಲಿ ಭಾಗವಹಿಸಲು ಆಗಮಿಸಿದ್ದ ಅವರು ಪುತ್ತೂರು ಬನ್ನೂರಿನಲ್ಲಿರುವ ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜೋಕಿಮ್ ಡಿಸೋಜರವರ ಮನೆಗೆ ಭೇಟಿ ನೀಡಿ ಸುದ್ದಿಯೊಂದಿಗೆ ಮಾತನಾಡಿದ ಅವರು ಕೇಂದ್ರದ ಬಿಜೆಪಿ ಸರಕಾರವು ಜುಮ್ಲಾ ಸರಕಾರವಾಗಿದೆ ೬೦ವರ್ಷದಲ್ಲಿ ಕಾಂಗ್ರೆಸ್ ಪಕ್ಷ ಏನು ಮಾಡಿದೆ ಎಂದು ಸವಾಲು ಹಾಕುವ ಬಿಜೆಪಿ ಪಕ್ಷಕ್ಕೆ ೭೦ವರ್ಷದಲ್ಲಿ ಕಾಂಗ್ರೆಸ್ ಏನು ಮಾಡಿದೆ ಯಾವ ಕೊಡುಗೆಗಳನ್ನು ನೀಡಿದೆ ಎಂದು ಇಡೀ ಜಗತ್ತಿಗೆ ಗೊತ್ತಿದೆ. ಆದರೆ ಕಾಂಗ್ರೆಸ್ ಎಂದಿಗೂ ಮಾಡದ ಕೆಲಸವನ್ನು ಬಿಜೆಪಿ ಕೇವಲ ೬ವರ್ಷದಲ್ಲಿ ಏನು ಮಾಡಿದೆ ಎಂದು ತೋರಿಸಿದೆ ಎಂದು ಹೇಳಿದರು. ಕೇವಲ ಭಾಷಣದಿಂದ ಹೊಟ್ಟೆ ತುಂಬುವುದಿಲ್ಲ. ಜನರಿಗೆ ಊಟ, ವಸತಿ, ವಿದ್ಯೆ, ಉದ್ಯೋಗ ಇವುಗಳನ್ನು ನೀಡದೆ ಜನ ಕಂಗಾಲಾಗಿದ್ದಾರೆ. ಕಾರ್ಗಿಲ್ ಯುದ್ಧದ ಸಂದರ್ಭದಲ್ಲಿ ಹಾಗೂ ಕೊರೋನಾ ಸಂದರ್ಭದಲ್ಲಿ ಬಿಜೆಪಿ ಮಾಡಿದ ಭ್ರಷ್ಟಾಚಾರವನ್ನು ಹಾಗೂ ಸರಕಾರದ ವೈಪಲ್ಯಗಳನ್ನು ಜನರ ಬಳಿಗೊಯ್ಯಲು ಡಿ.ಕೆ. ಶಿವಕುಮಾರ್‌ರವರು ನಿರ್ಧರಿಸಿದ್ದಾರೆ ಎಂದು ಪ್ಯಾರಿಜಾನ್‌ರವರು ಹೇಳಿದರು.


ಡಿ.ಕೆ. ಶಿವಕುಮಾರ್‌ರವರು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕರಾದ ಬಳಿಕ ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಮುಂಚೂಣಿಯಲ್ಲಿ ಕೆಲಸ ಕಾರ್ಯಗಳನ್ನು ಮಾಡುತ್ತಿದ್ದು ಇವತ್ತು ಬಂಟ್ವಾಳದಲ್ಲಿ ಮೈಸೂರು ವಿಭಾಗ ಮಟ್ಟದ ಪ್ರತಿನಿಧಿಗಳ ಸಂಕಲ್ಪ ಸಮಾವೇಶ ಹಮ್ಮಿಕೊಂಡಿದ್ದು ಈ ಪ್ರತಿನಿಧಿಗಳ ಸಮಾವೇಶದಲ್ಲಿ ಹಾಲಿ ಮಾಜಿ ಶಾಸಕರುಗಳು, ಸಂಸದರು, ವಿಧಾನ ಪರಿಷತ್ತು ಸದಸ್ಯರುಗಳು, ಮಾಜಿ ಸಚಿವರುಗಳು, ಬ್ಲಾಕ್ ಮಟ್ಟದ ಅಧ್ಯಕ್ಷರುಗಳು, ಕಾಂಗ್ರೆಸ್ ಪಕ್ಷದ ವಿವಿಧ ಸೆಲ್‌ಗಳ ವಿವಿಧ ಘಟಕದ ಪದಾಧಿಕಾರಿಗಳು ಭಾಗವಹಿಸುತ್ತಿದ್ದಾರೆ ಎಂದು ಪ್ಯಾರಿಜಾನ್‌ರವರು ಹೇಳಿದರು. ಕಲುಬುರ್ಗಿ, ಬೆಳಗಾಂ, ಬೆಂಗಳೂರು ವಿಭಾಗ ಮಟ್ಟದ ಪ್ರತಿನಿಧಿಗಳ ಸಭೆಯು ಶೀಘ್ರದಲ್ಲೇ ನಡೆಯಲಿದೆ. ಬಳಿಕ ರಾಜ್ಯಾದ್ಯಂತ ಜಿಲ್ಲಾ ಮಟ್ಟದಲ್ಲಿ ಪ್ರವಾಸ ಕೈಗೊಂಡು ಬಿಜೆಪಿ ಸರಕಾರ ವೈಪಲ್ಯಗಳನ್ನು ಹಾಗೂ ಪಕ್ಷ ಸಂಘಟನೆ ಬಗ್ಗೆ ಜನರಿಗೆ ತಿಳಿಸುವ ಕೆಲಸ ನಡೆಸಲಿದ್ದಾರೆ ಎಂದು ಅವರು ಈ ವರ್ಷವನ್ನು ಸಂಘಟನೆಯ ವರ್ಷವನ್ನಾಗಿ ಘೋಷಿಸಿದ್ದು ಈ ವರ್ಷ ಪೂರ್ತಿ ಎಲ್ಲಾ ಜಿಲ್ಲೆಗಳಲ್ಲಿ ಬ್ಲಾಕ್ ಮಟ್ಟದಲ್ಲಿ ಹಾಗೂ ವಾರ್ಡ್ ಮಟ್ಟದಲ್ಲಿ ಸಭೆ ನಡೆಯಲಿದೆ. ಜನರ ಮಧ್ಯೆ ಹೋಗಿ ಕೆಲಸ ಕಾರ್ಯಗಳನ್ನು ಮಾಡಲಿದ್ದಾರೆ ಎಂದು ಅವರು ಹೇಳಿದರು.

ಪುತ್ತೂರು ಕಾಂಗ್ರೆಸ್ ಸೇವಾದಳದ ಅಧ್ಯಕ್ಷ ಜೋಕಿಮ್ ಡಿಸೋಜ ಸ್ವಾಗತಿಸಿ ವಂದಿಸಿದರು. ಈ ಸಂದರ್ಭದಲ್ಲಿ ಪುತ್ತೂರು ನಗರಸಭಾ ಮಾಜಿ ಅಧ್ಯಕ್ಷ ನೆಲ್ಲಿಕಟ್ಟೆ ಜಗದೀಶ ಶೆಟ್ಟಿ, ಪುತ್ತೂರು ನಗರ ಕಾಂಗ್ರೆಸ್ ಅಧ್ಯಕ್ಷ ಸೂತ್ರಬೆಟ್ಟು ಜಗನ್ನಾಥ ರೈ, ಕಾಂಗ್ರೆಸ್ ಸೇವಾದಳದ ವಿವಿಧ ಪದಾಧಿಕಾರಿಗಳಾದ ಸಂತೋಷ್ ಭಂಡಾರಿ ಚಿಲ್ಮೆತ್ತಾರು, ಕೇಶವ ಪಡೀಲ್, ಹಂಸ ಸರ್ವೆ, ಪೂರ್ಣೇಶ್ ಮೊದಲಾದವರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.