ಪುತ್ತೂರು: ನಾನ್ಸಿಆರ್ಝಡ್ ಪ್ರದೇಶದ ಮರಳು ನೀತಿಯಲ್ಲಿ ಪಾರಂಪರಿಕವಾಗಿ ಮರಳುಗಾರಿಕೆ ಮಾಡುವವರಿಗೆ ಅವಕಾಶ ಕಲ್ಪಿಸುವಂತೆ ದ.ಕ.ಮರಳು ವ್ಯಾಪಾರಸ್ಥರ ಸಂಘದಿಂದ ಗಣಿ ಮತ್ತು ಭು ವಿಜ್ಞಾನ ಸಚಿವ ಸಿ.ಸಿ ಪಾಟೀಲ್ ಅವರಿಗೆ ಸಂಸದ ನಳಿನ್ ಕುಮಾರ್ ಕಟೀಲ್ ಅವರ ಮೂಲಕ ಮನವಿ ಮಾಡಲಾಯಿತು. ಸಂಘದ ಅಧ್ಯಕ್ಷ ದಿನೇಶ್ ಮೆದು ಮತ್ತು ಪ್ರಧಾನ ಕಾರ್ಯದರ್ಶಿ ಚಂದ್ರಹಾಸ್ ಪಲ್ಲಿಪಾಡಿ ಅವರು ಮಂಗಳೂರಿನಲ್ಲಿ ಮನವಿ ಸಲ್ಲಿಸಿದ್ದಾರೆ.