ಕಾವು: ದಕ್ಷಿಣ ಕನ್ನಡ ಹಾಲು ಉತ್ಪಾದಕರ ಒಕ್ಕೂಟ ಮಂಗಳೂರು ಇವರ ಸಹಯೋಗದೊಂದಿಗೆ ಮಾಡ್ನೂರು ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ಪಾರಂಪರಿಕ ಪಶು ಔಷಧಿ, ಮನೆಮದ್ದು ಮಾಹಿತಿ ಶಿಬಿರವು ಜ.೭ರಂದು ಕಾವು ಸಹಕಾರ ಸಂಘದ ಶಿವಸದನ ಸಭಾಭವನದಲ್ಲಿ ನಡೆಯಿತು.
ಸಂಘದ ಸ್ಥಾಪಕಾಧ್ಯಕ್ಷ, ನಿರ್ದೇಶಕರೂ ಆಗಿರುವ ನನ್ಯ ಅಚ್ಚುತ ಮೂಡೆತ್ತಾಯರವರು ಸಭಾಧ್ಯಕ್ಷತೆ ವಹಿಸಿ ಮಾತನಾಡಿದರು. ದ.ಕ ಹಾಲು ಒಕ್ಕೂಟದ ಉಪವ್ಯವಸ್ಥಾಪಕರಾದ ಶ್ರೀನಿವಾಸ ಎಂ ಮತ್ತು ಡಾ. ಸತೀಶ್ ರಾವ್ರವರು ಪಾರಂಪರಿಕ ಪಶು ಔಷಧಿಯ ಬಗ್ಗೆ ಮಾಹಿತಿ ನೀಡಿದರು. ಸಂಘದ ಕಾರ್ಯದರ್ಶಿ ಬಾಲಕೃಷ್ಣ ಕೆದಿಲಾಯ ಸ್ವಾಗತಿಸಿ, ನಿರ್ದೇಶಕ ನಾರಾಯಣ ಶರ್ಮರವರು ವಂದಿಸಿದರು. ಕಾರ್ಯಕ್ರಮದಲ್ಲಿ ಸಂಘದ ನಿರ್ದೇಶಕರುಗಳು, ಸದಸ್ಯರುಗಳು ಭಾಗವಹಿಸಿ ಮಾಹಿತಿ ಪಡೆದುಕೊಂಡರು.