HomePage_Banner
HomePage_Banner
HomePage_Banner
HomePage_Banner

ವಿಟ್ಲ: ಬೆಂಕಿಹಚ್ಚಿಕೊಂಡು ಮಹಿಳೆ ಆತ್ಮಹತ್ಯೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1


ವಿಟ್ಲ: ವಿವಾಹಿತ ಮಹಿಳೆಯೋರ್ವರು ಡಿಸೇಲ್ ಸುರಿದು ಬೆಂಕಿಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ತಾಲೂಕು ವಿಟ್ಲ ಕಸಬ ಗ್ರಾಮದ ಶಿವಾಜಿ ನಗರ ,ನೆಕ್ಕರೆಕಾಡು ಎಂಬಲ್ಲಿ ನಡೆದ ಬಗ್ಗೆ ವರದಿಯಾಗಿದೆ.

ವಿಟ್ಲ ಕಸಬ ಗ್ರಾಮದ ಶಿವಾಜಿ ನಗರ ,ನೆಕ್ಕರೆಕಾಡು ನಿವಾಸಿ  ಬಾಲಕೃಷ್ಣ ರವರ ಪತ್ನಿ ವನಿತಾ(೪೦ ವ.) ರವರು ಮೃತ ದುರ್ದೈವಿಯಾಗಿದ್ದಾರೆ.  ನಾವು ಜ.೬ರಂದು ಎಂದಿನಂತೆ ಮನೆಯಲ್ಲಿ ಊಟಮಾಡಿ ಮಲಗಿದ್ದು, ಜ.೭ರಂದು ಬೆಳಗ್ಗೆ ಎದ್ದು ನೋಡಿದಾಗ ಪತ್ನಿ ಬೆಂಕಿ ಹಚ್ಚಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಕೂಡಲೇ  ವಿಟ್ಲ ಸರಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಆ ವೇಳೆಗಾಗಲೇ ಆಕೆ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದರು ಎಂದು ಮೃತರ ಪತಿ ಬಾಲಕೃಷ್ಣ ರವರು ವಿಟ್ಲ ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ವಿವರಿಸಿದ್ದಾರೆ. ಈ ಬಗ್ಗೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಾಲಕೃಷ್ಣರವರು ತೀರ ಬಡಕುಟುಂಬವಾಗಿರುವ ಹಿನ್ನೆಲೆಯಲ್ಲಿ ಮರಣೋತ್ತರ ಪರೀಕ್ಷೆ ನಡೆದ ಬಳಿಕ ಮೃತದೇಹವನ್ನು ಫ್ರೆಂಡ್ಸ್ ವಿಟ್ಲದ ತಂಡ ಪಳಿಕೆ ಹಿಂದು ರುದ್ರಭೂಮಿಯಲ್ಲಿ ಮನೆಯವರ ಸಮ್ಮುಖದಲ್ಲಿ ಅಂತ್ಯಕ್ರಿಯೆ ನೆರವೇರಿಸಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.