HomePage_Banner
HomePage_Banner
HomePage_Banner
HomePage_Banner

ಸಾಹೇಬ್ರು ಬಂದವೇ ನಾಟಕ- ಪುರಭವನಕ್ಕೆ ಸ್ಥಳಾಂತರ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
ಪುತ್ತೂರು: ಡಾ.ಶಿವರಾಮ ಕಾರಂತರ ಬಾಲವನ ಹಾಗೂ ಸಹಾಯಕ ಆಯುಕ್ತರ ಕಛೇರಿ ಪುತ್ತೂರು ಇದರ ಆಶ್ರಯದಲ್ಲಿ ಜ 09. ರಂದು ಶನಿವಾರ  ಸಂಜೆ 6.00 ಗಂಟೆಯಿಂದ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಪ್ರಸುತ ಪಡಿಸುವ ‘ಸಾಹೇಬ್ರು ಬಂದವೇ’ (ನಿರ್ದೇಶನ: ಜೀವನ್ ರಾಂ ಸುಳ್ಯ) ನಾಟಕ ಅಕಾಲಿಕ ಮಳೆಯ ಕಾರಣದಿಂದ ಬಾಲವನದಲ್ಲಿ  ಪ್ರದರ್ಶನಗೊಳ್ಳುವ ಬದಲು ನಿಗದಿತ ಅವಧಿಯಲ್ಲೇ ಪುತ್ತೂರಿನ ಪುರಭವನದಲ್ಲಿ ಪ್ರದರ್ಶನಗೊಳ್ಳಲಿದೆ.
ನಾಟಕದ ಆರಂಭದಲ್ಲಿ ನಡೆಯುವ ಕಿರು ಸಮಾರಂಭದಲ್ಲಿ ದ.ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಸಂಜೀವ ಮಠಂದೂರು, ಸಹಾಯಕ ಆಯುಕ್ತ ಡಾ. ಯತೀಶ್ ಉಳ್ಳಾಲ್, ತಾ.ಪಂ ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್, ನಗರಸಭೆ ಅಧ್ಯಕ್ಷ ಜೀವಂಧರ್ ಜೈನ್, ಅಕಾಡೆಮಿ ಅಧ್ಯಕ್ಷರು ಹಾಗೂ ಸದಸ್ಯರು ಭಾಗವಹಿಸಲಿದ್ದಾರೆ. ಸಮಯಕ್ಕೆ ಸರಿಯಾಗಿ ನಡೆಯುವ ಈ ಕಾರ್ಯಕ್ರಮಕ್ಕೆ ರಂಗಾಸಕ್ತರು ಅಧಿಕ ಸಂಖ್ಯೆಯಲ್ಲಿ ಪುರಭವನದಲ್ಲಿ ಭಾಗವಹಿಸುವಂತೆ ಬಾಲವನದ ವಿಶೇಷ ಕರ್ತವ್ಯಾಧಿಕಾರಿ ಹಾಗೂ ಅಕಾಡೆಮಿಯ ರಿಜಿಸ್ಟ್ರಾರ್ ವಿನಂತಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.