ಪುತ್ತೂರು: ಕರ್ನಾಟಕ ಪತ್ರಕರ್ತರ ಸಂಘ ಪುತ್ತೂರು ತಾಲೂಕು ಇದರ ವತಿಯಿಂದ ಕನ್ನಡ ರಾಜ್ಯೋತ್ಸವದ ಅಂಗವಾಗಿ ನಡೆಸಲಾದ ಪ್ರಬಂಧ ಹಾಗೂ ಕವನ ಸ್ಪರ್ಧೆಯ ವಿಜೇತರಿಗೆ ಪ್ರಶಸ್ತಿ ವಿತರಣಾ ಸಮಾರಂಭ ಜ.೮ರಂದು ದರ್ಬೆ ಸಂತೃಪ್ತಿ ಹೊಟೇಲ್ ಮುಂಭಾಗದ ಸಣ್ಣ ಕೈಗಾರಿಕಾ ಸಹಕಾರಿ ಸಂಘದ ಕೈಗಾರಿಕಾ ಸಹಕಾರಿ ಭವನದಲ್ಲಿ ನಡೆಯಿತು.
ಕರ್ನಾಟಕ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಸುದೇಶ್ ಕುಮಾರ್ ದೀಪ ಪ್ರಜ್ವಲಿಸಿ ಕಾರ್ಯಕ್ರಮ ಉದ್ಘಾಟಿಸಿ ಶುಭಹಾರೈಸಿದರು. ಕರ್ನಾಟಕ ಪತ್ರಕರ್ತರ ಸಂಘದ ತಾಲೂಕು ಘಟಕದ ಅಧ್ಯಕ್ಷ ಯೂಸುಫ್ ರೆಂಜಲಾಡಿ ಅಧ್ಯಕ್ಷತೆ ವಹಿಸಿದ್ದರು. ವಿವೇಕಾನಂದ ಕಾಲೇಜಿನ ಪತ್ರಿಕೋದ್ಯಮದ ಉಪನ್ಯಾಸಕಿ ಭವ್ಯ ಪಿ.ಆರ್ ನಿಡ್ಪಳ್ಳಿ ವಿಶೇಷ ಉಪನ್ಯಾಸ ನೀಡಿದರು. ಪದ್ಮಶ್ರೀ ಸೋಲಾರ್ ಸಿಸ್ಟಮ್ನ ಮ್ಹಾಲಕ ಸೀತಾರಾಮ ರೈ ಕೆದಂಬಾಡಿಗುತ್ತು ಪ್ರಶಸ್ತಿ ವಿತರಿಸಿ ಶುಭಹಾರೈಸಿದರು. ಕರ್ನಾಟಕ ಪತ್ರಕರ್ತರ ಸಂಘದ ತಾಲೂಕು ಘಟಕದ ಸ್ಥಾಪಕಾಧ್ಯಕ್ಷ ಉಮೇಶ್ ಮಿತ್ತಡ್ಕ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸಂಘದ ಪ್ರಧಾನ ಕಾರ್ಯದರ್ಶಿ ಲಕ್ಷ್ಮೀಕಾಂತ್ ಅನಿಕೂಟೇಲು ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದರು. ಮಾಜಿ ಅಧ್ಯಕ್ಷ ಸದಾಶಿವ ಶೆಟ್ಟಿ ಮಾರಂಗ ವಂದಿಸಿದರು. ಉಪಾದ್ಯಕ್ಷೆ ಶೈಲಜಾಸುದೇಶ್ ಕಾರ್ಯಕ್ರಮ ನಿರೂಪಿಸಿದರು. ಸಂಘದ ಸದಸ್ಯೆ ರಕ್ಷಿತಾ ಪ್ರಾರ್ಥಿಸಿದರು. ಜತೆಕಾರ್ಯದರ್ಶಿ ಜನಾರ್ಧನ ಮಚ್ಚಿಮಲೆ, ಕೋಶಾಧಿಕಾರಿ ನರೇಶ್ ಜೈನ್, ಸಂಘದ ಸದಸ್ಯರು, ಪ್ರಶಸ್ತಿ ವಿಜೇತರು ಹಾಗೂ ಪೋಷಕರು, ಸಣ್ಣ ಕೈಗಾರಿಕಾ ಸಹಕಾರಿ ಸಂಘದ ಸಿಬ್ಬಂದಿಗಳು ಉಪಸ್ಥಿತರಿದ್ದರು.