ಪುತ್ತೂರು: ರೋಟರಿ ಕ್ಲಬ್ ಪುತ್ತೂರು ಎಲೈಟ್, ರೋಟರಿ ಕ್ಲಬ್ ಪುತ್ತೂರು ಸ್ವರ್ಣ, ರೋಟರಿ ಕ್ಲಬ್ ಪುತ್ತೂರು ಸೆಂಟ್ರಲ್, ಸುದಾನ ವಸತಿಯುತ ಶಾಲೆ ಪುತ್ತೂರು, ಇನ್ನರ್ವೀಲ್ ಕ್ಲಬ್ ಪುತ್ತೂರು, ಶಾರದಾ ಆಯುರ್ವೇದ ಮೆಡಿಕಲ್ ಶಾಲೆ ಮತ್ತು ಆಸ್ಪತ್ರೆ ತಲಪಾಡಿ-ಮಂಗಳೂರು ಇವುಗಳ ಸಂಯುಕ್ತ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣೆ ಚಿಕಿತ್ಸೆ ಮತ್ತು ಔಷಧಿ ವಿತರಣಾ ಶಿಬಿರ, ಹಲವು ವಾತ ಸಂಬಂಧಿ ನೋವುಗಳ ಉಪಶಮನಕ್ಕೆ ಪಿಚು(ಹಲವು ಕಾಯಿಲೆಗಳಿಗೆ ಪರಿಣಾಮಕಾರಿ), ಹಿಜಾಮಾ ವಿಶೇಷ ಚಿಕಿತ್ಸಾ ಸೌಲಭ್ಯಗಳು ಜ.೧೦ ರಂದು ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೆ ಮಂಜಲ್ಪಡ್ಪು ಸುದಾನ ವಸತಿಯುತ ಶಾಲೆಯಲ್ಲಿ ಜರಗಲಿದೆ.
ಸುದಾನ ಶಾಲೆಯ ಸಂಚಾಲಕರಾದ ವಂ|ವಿಜಯ ಹಾರ್ವಿನ್ರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ರೋಟರಿ ಜಿಲ್ಲೆ ೩೧೮೧ ಇದರ ಜಿಲ್ಲಾ ಕಾರ್ಯದರ್ಶಿ ವಿಕ್ರಮ್ ದತ್ತ, ಶಾರದಾ ಆಯುರ್ವೇದ ಆಸ್ಪತ್ರೆಯ ಪ್ರಾಧ್ಯಾಪಕರು ಹಾಗೂ ಹಿರಿಯ ವೈದ್ಯರಾದ ಡಾ.ಅಜಂತರವರು ಭಾಗವಹಿಸಲಿದ್ದಾರೆ. ರೋಟರಿ ಸೆಂಟ್ರಲ್ ಅಧ್ಯಕ್ಷ ವೆಂಕಟ್ರಾಜ್, ರೋಟರಿ ಸ್ವರ್ಣ ಅಧ್ಯಕ್ಷೆ ಸೆನೋರಿಟ ಆನಂದ್, ಇನ್ನರ್ವೀಲ್ ಕ್ಲಬ್ ಅಧ್ಯಕ್ಷೆ ಸೀಮಾ ನಾಗರಾಜ್ರವರ ಉಪಸ್ಥಿತಿಯಲ್ಲಿ ಕಾರ್ಯಕ್ರಮ ಜರಗಲಿದೆ.
ಶಿಬಿರದಲ್ಲಿ ಭಾಗವಹಿಸುವವರಿಗೆ ಶಾರದಾ ಆಯುರ್ವೇದ ಆಸ್ಪತ್ರೆಯ ಆರೋಗ್ಯ ಕಾರ್ಡನ್ನು ವಿತರಿಸಲಾಗುವುದು. ಶಿಬಿರದಲ್ಲಿ ಭಾಗವಹಿಸುವ ಪ್ರತಿಯೊಬ್ಬರೂ ಮಾಸ್ಕ್ ಧರಿಸುವುದು ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ತಮ್ಮ ತಮ್ಮ ಆರೋಗ್ಯ ಸಮಸ್ಯೆಗಳಿಗೆ ತಜ್ಞ ವೈದ್ಯರಿಂದ ಆರೋಗ್ಯ ತಪಾಸಣೆ, ಸಲಹೆ, ಔಷಧಿ ಪಡೆದುಕೊಳ್ಳಬೇಕಾಗಿ ಕಾರ್ಯಕ್ರಮದ ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.