HomePage_Banner
HomePage_Banner
HomePage_Banner
HomePage_Banner

ಜಿಲ್ಲೆಯಲ್ಲಿ ಇನ್ನು ಎರಡು ದಿನ‌ ಭಾರಿ ಮಳೆ ಸಾಧ್ಯತೆ : ‘ಯೆಲ್ಲೊ ಅಲರ್ಟ್’ ಘೋಷಣೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1


ಪುತ್ತೂರು: ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ತೀವ್ರತೆ ಹಾಗೂ ಪೂರ್ವವಲಯದ ಮೋಡಗಳ ಚಲನೆ ಹೆಚ್ಚಾಗಿರುವುದರಿಂದ  ಎರಡು ದಿನ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳು ಸೇರಿ ಒಟ್ಟು ಏಳು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ತೀವ್ರತೆ ಇರುವುದರಿಂದ ಈಗಾಗಲೇ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಮುಂದಿನ 48 ಗಂಟೆಗಳಲ್ಲಿ ಕರಾವಳಿ, ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಹಾಗೂ ಉತ್ತರ ಒಳನಾಡಿನ ವಿವಿಧೆಡೆ ಅಲ್ಲಲ್ಲಿ ತುಂತುರು ಮಳೆಯಾಗುವ ಸಾಧ್ಯತೆ ಇದೆ.

ಜಿಲ್ಲೆಯಲ್ಲಿ ಜ.12ರ ವರೆಗೆ ಮಳೆ: ರಾಜ್ಯದ ಏಳು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಯೆಲ್ಲೋ ಅರ್ಲಟ್ ಇರುವುದರೊಂದಿಗೆ ಜ.12ರ ವರೆಗೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾದರೆ, ಇನ್ನು ಕೆಲವೆಡೆ ತುಂತುರು ಮಳೆಯಾಗಲಿದೆ. ಗರಿಷ್ಠ ತಾಪಮಾನ 25 ಡಿ. ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನ 19 ಡಿ.ಸೆಲ್ಸಿಯಸ್ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.