ಕಾಣಿಯೂರು: ಕಾಣಿಯೂರು ಗ್ರಾಮದ ಏಲಡ್ಕ ಎಂಬಲ್ಲಿರುವ ಶ್ರೀ ಶಿರಾಡಿ ರಾಜನ್ ದೈವ ಮತ್ತು ಚಾಮುಂಡಿ ದೈವ ಹಾಗೂ ಶ್ರೀ ಪರಿವಾರ ದೈವಗಳ ಪ್ರತಿಷ್ಠಾ ೧೩ನೇ ವಾರ್ಷಿಕೋತ್ಸವ ಹಾಗೂ ೪೮ ಕಾಯಿಯ ಶ್ರೀ ಗಣಪತಿ ಹೋಮವು ಸುಬ್ರಹ್ಮಣ್ಯ ಶ್ರೀ ಕ್ಷೇತ್ರದ ಮಾಜಿ ಅರ್ಚಕ ಬ್ರಹ್ಮಶ್ರೀ ಬಿ. ಕೇಶವ ಜೋಗಿತ್ತಾಯರ ನೇತೃತ್ವದಲ್ಲಿ ಜ.12ರಂದು ನಡೆಯಲಿದೆ.
ಬೆಳಿಗ್ಗೆ ಸ್ವಸ್ತಿ ಪುಣ್ಯಾಹ ವಾಚನ, ದೈವತಾ ಪ್ರಾರ್ಥನೆ, ಕಲಶಾಭಿಷೇಕ,48 ಕಾಯಿಯ ಗಣಪತಿ ಹೋಮ, ಪೂರ್ಣಾಹುತಿ, ಮಹಾಪೂಜೆ ನಡೆಯಲಿದೆ. ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.