ನಿಡ್ಪಳ್ಳಿ; ದ.ಕ.ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ತಾಲೂಕು ಕಾನೂನು ಸೇವಾ ಸಮಿತಿ, ಅರೆ ಕಾನೂನು ಸ್ವಯಂ ಸೇವಕರುಗಳ ನೇಮಕಾತಿಯಲ್ಲಿ ಪುತ್ತೂರು ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ಸಾಮಾಜಿಕ ಕಾರ್ಯಕರ್ತ ಡಾ.ಹಾಜಿ.ಯಸ್.ಅಬೂಬಕ್ಕರ್ ಆರ್ಲಪದವು ಇವರನ್ನು ಗೌರವಾನ್ವಿತ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ನೇಮಕಾತಿ ಮಾಡಲಾಗಿದೆ.

ಡಾ.ಹಾಜಿ.ಯಸ್ ಅಬೂಬಕ್ಕರ್ ಆರ್ಲಪದವು ಇವರು ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ದ ಕ ಜಿಲ್ಲಾಧ್ಯಕ್ಷರಾಗಿ, ದ ಕ ಜಿಲ್ಲಾ ವಿ.ಎಲ್. ಇ ಸೊಸೈಟಿ ಪ್ರಧಾನ ಕಾರ್ಯದರ್ಶಿಯಾಗಿ, ಕರ್ನಾಟಕ ಮುಸ್ಲಿಂ ಜಮಾಅತ್ ಪುತ್ತೂರು ತಾಲೂಕು ಉಪಾಧ್ಯಕ್ಷರಾಗಿ,ಶ್ರೀ ಜ್ಞಾನ ಮಂದಾರ ಶಿಕ್ಷಣ ಸಂಸ್ಥೆ ಬೆಂಗಳೂರು ಇದರ ಜಿಲ್ಲಾ ಸಂಯೋಜಕರಾಗಿ , ಪುತ್ತೂರು ಶಿಕ್ಷಣ ಸಂಪನ್ಮೂಲ ಕೇಂದ್ರದ ಪ್ರಧಾನ ಕಾರ್ಯದರ್ಶಿಯಾಗಿ,ಗಡಿನಾಡ ಸಂಘಟನೆಗಳ ರೂವಾರಿಗಳಾಗಿ, ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷರಾಗಿ, ಗಡಿನಾಡ ಶ್ರೇಯೋಭಿವೃದ್ಧಿ ಟ್ರಸ್ಟ್ ಅಧ್ಯಕ್ಷರಾಗಿ, ಅಲ್ಲದೆ ಕನ್ನಡ ಸಾಹಿತ್ಯ ಪರಿಷತ್ತು, ಜಮೀಯ್ಯತ್ತುಲ್ ಫಲಾಹ್ ಸೇರಿದಂತೆ ಹಲವಾರು ಶೈಕ್ಷಣಿಕ, ಸಾಮಾಜಿಕ, ಧಾರ್ಮಿಕ ಸಂಘ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.