HomePage_Banner
HomePage_Banner
HomePage_Banner
HomePage_Banner

ಕಾವು ಸಹಕಾರ ಸಂಘದ ಉದ್ದೇಶಿತ ಸೂಪರ್ ಮಾರ್ಕೆಟ್‌ಗೆ ರಾಜ್ಯ ಸಹಕಾರ ಮಾರಾಟ ಮಹಾಮಂಡಳದಿಂದ ರೂ.5 ಲಕ್ಷ ಸಹಾಯಧನ | ಶಶಿಕುಮಾರ್ ಬಾಲ್ಯೊಟ್ಟುರವರ ಮೂಲಕ ಚೆಕ್ ಹಸ್ತಾಂತರ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
ವರದಿ: ಸುನೀಲ್ ಎನ್ ಕಾವು
ಚಿತ್ರ: ಎನ್.ಎಸ್ ಕಾವು

ಕಾವು: ಶತಮಾನ ಪೂರೈಸಿರುವ ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಪ್ರಾರಂಭಿಸಲು ಉದ್ದೇಶಿಸಿರುವ ಸೂಪರ್ ಮಾರ್ಕೆಟ್‌ಗೆ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದಿಂದ ರೂ.೫ ಲಕ್ಷ ಸಹಾಯಧನ ನೀಡಲಾಯಿತು. ಜ.೧೧ರಂದು ಎಸ್‌ಸಿಡಿಸಿಸಿ ಬ್ಯಾಂಕ್‌ನ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟುರವರು ಸಂಘದ ಅಧ್ಯಕ್ಷ ನನ್ಯ ಅಚ್ಚುತ ಮೂಡೆತ್ತಾಯರವರಿಗೆ ರೂ.೫ ಲಕ್ಷದ ಚೆಕ್ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಕೇಶವಮೂರ್ತಿ ಪಿ.ಜಿ ರವರು ಉಪಸ್ಥಿತರಿದ್ದರು.

ಕಾವು ಸಹಕಾರ ಸಹಕಾರ ಸಂಘದ ಕಟ್ಟಡದಲ್ಲಿ ಪ್ರಾರಂಭಿಸಲು ಉದ್ದೇಶಿಸಿರುವ ಸೂಪರ್ ಮಾರ್ಕೆಟ್‌ಗೆ ಸಹಾಯಧನ ನೀಡುವಂತೆ ಕೋರಿ ಎಸ್‌ಸಿಡಿಸಿಸಿ ಬ್ಯಾಂಕ್‌ನ ಅಧ್ಯಕ್ಷ, ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷರೂ ಆಗಿರುವ ಡಾ. ಎಂ.ಎನ್ ರಾಜೇಂದ್ರ ಕುಮಾರ್‌ರವರಿಗೆ ಮನವಿ ಮಾಡಿದ ಹಿನ್ನಲೆಯಲ್ಲಿ, ಡಾ. ಎಂ.ಎನ್ ರಾಜೇಂದ್ರ ಕುಮಾರ್‌ರವರು ತಕ್ಷಣವೇ ಸ್ಪಂದಿಸಿ ರಾಜ್ಯ ಸಹಕಾರ ಮಾರಾಟ ಮಹಾಮಂಡಳದಿಂದ ರೂ.೫ ಲಕ್ಷ ಮಂಜೂರುಗೊಳಿಸಿ, ಎಸ್‌ಸಿಡಿಸಿಸಿ ಬ್ಯಾಂಕ್‌ನ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟುರವರ ಮೂಲಕ ಚೆಕ್ ಹಸ್ತಾಂತರಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.