ಪುತ್ತೂರು: ಮುಂಡೂರು ಉದಯಗಿರಿ ಶ್ರೀವಿಷ್ಣುಮೂರ್ತಿ ಭಜನಾ ಮಂಡಳಿಯ 27ನೇ ವಾರ್ಷಿಕೋತ್ಸವ ಹಾಗೂ 18 ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಜ.14 ಮಕರ ಸಂಕ್ರಾಂತಿಯ ದಿನ ಬೆಳಿಗ್ಗೆ ಉದಯಗಿರಿ ಶ್ರೀ ವಿಷ್ಣುಮೂರ್ತಿ ದೈವದ ಸನ್ನಿದಿಯ ಆವರಣದಲ್ಲಿ ನಡೆಯಲಿದೆ. ವಾರ್ಷಿಕೋತ್ಸವದ ಅಂಗವಾಗಿ ವೇ.ಮೂ ಶ್ರೀವತ್ಸ ಕೆದಿಲಾಯರವರ ನೇತೃತ್ವದಲ್ಲಿ ಮಹಾಗಣಪತಿ ಹೋಮ ನಡೆದ ಬಳಿಕ ಶ್ರೀ ಸತ್ಯನಾರಾಯಣ ಪೂಜೆ ನಡೆಯಲಿದೆ.
ಮಧ್ಯಾಹ್ನ ಧಾರ್ಮಿಕ ಸಭೆ ಹಾಗೂ ಸನ್ಮಾನ ಕಾರ್ಯಕ್ರಮ ನಡೆಯಲಿದ್ದು, ಉದಯಗಿರಿ ಶ್ರೀವಿಷ್ಣುಮೂರ್ತಿ ಒತ್ತೆಕೋಲ ಸಮಿತಿ ಅಧ್ಯಕ್ಷ ಸದಾಶಿವ ಶೆಟ್ಟಿ ಪಟ್ಟೆ ಸಭಾಧ್ಯಕ್ಷತೆ ವಹಿಸಲಿದ್ದಾರೆ. ಉದಯಗಿರಿ ವಿಷ್ಣುಮೂರ್ತಿ ಭಜನಾ ಮಂಡಳಿಯ ಗೌರವಾಧ್ಯಕ್ಷ ಜಯಂತ ನಡುಬೈಲು, ಗೌರವ ಸಲಹೆಗಾರ ವಸಂತ ರೈ ಶಿಬರ ಹಾಗೂ ಅಧ್ಯಕ್ಷ ವಿನೋದ್ ಶೆಟ್ಟಿ ಪಂಜಳ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.
ಮಧ್ಯಾಹ್ನ ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆದ ಬಳಿಕ ಹನುಮಗಿರಿ ಕೋದಂಡರಾಮ ಕೃಪಾ ಪೋಷಿತ ಯಕ್ಷಗಾನ ಮಂಡಳಿಯವರಿಂದ ಶಬರಿಮಲೆ ಸ್ವಾಮಿ ಅಯ್ಯಪ್ಪ ಯಕ್ಷಗಾನ ಬಯಲಾಟ ನಡೆಯಲಿದೆ. ಪ್ರತಿ ವರ್ಷ ಸಂಜೆ ವೇಳೆ ನಡೆಯುತ್ತಿದ್ದ ವಾರ್ಷಿಕೋತ್ಸವ ಹಾಗೂ ಸತ್ಯನಾರಾಯಣ ಪೂಜೆಯನ್ನು ಕೊರೋನಾದ ಹಿನ್ನೆಲೆಯಲ್ಲಿ ಈ ವರ್ಷ ಬೆಳೆಗ್ಗೆ ನಡೆಯಲಿದೆ. ಭಕ್ತಾದಿಗಳು ಸಹಕರಿಸುವಂತೆ ವಿಷ್ಣುಮೂರ್ತಿ ಭಜನಾ ಮಂಡಳಿಯ ಪ್ರಕಟಣೆ ತಿಳಿಸಿದೆ.