
ನಿಡ್ಪಳ್ಳಿ: ದ.ಕ.ಜಿಲ್ಲಾ ಪಂಚಾಯತ್ ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆ ಒಡ್ಯ, ಪಾಣಾಜೆ ಇಲ್ಲಿನ 8ನೇ ತರಗತಿ ವಿದ್ಯಾರ್ಥಿನಿ ಕು.ಅರ್ಚನಾ.ಬಿ. 2020-21ನೇ ಸಾಲಿನ ಇನ್ ಸ್ಪೈರ್ ಅವಾರ್ಡ್ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ. ಶಿಕ್ಷಕಿ ದಿವ್ಯಾ ಪಡುಬಿದ್ರಿ ಇವಳಿಗೆ ಮಾರ್ಗದರ್ಶನ ನೀಡಿರುತ್ತಾರೆ. ಈಕೆ ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ಶ್ರೀಕೃಷ್ಣ ಭಟ್ ಬಟ್ಯಮೂಲೆ ಮತ್ತು ಲತಾ.ಎಸ್ ಭಟ್ ಇವರ ಪುತ್ರಿಯಾಗಿದ್ದಾಳೆ.