ಪುತ್ತೂರು: ವಿಶ್ವವಿದ್ಯಾನಿಲಯ ಧನಸಹಾಯ ಆಯೋಗದಿಂದ ಮಾನ್ಯತೆ ಪಡೆದಿರುವ ನೋಡಲ್ ಏಜೆನ್ಸಿಯಾಗಿರುವ ಮೈಸೂರು ವಿಶ್ವವಿದ್ಯಾನಿಲಯವು ಕಳೆದ ಸಪ್ಟೆಂಬರ್ ತಿಂಗಳಿನಲ್ಲಿ ನಡೆಸಿರುವ ಕರ್ನಾಟಕ ರಾಜ್ಯ ಉಪನ್ಯಾಸಕರ ಅರ್ಹತಾ ಪರೀಕ್ಷೆ(ಕೆ-ಸೆಟ್)ಯಲ್ಲಿ ಮಾಯಿದೆ ದೇವುಸ್ ಚರ್ಚ್ ಸಮೂಹ ಶಿಕ್ಷಣ ಸಂಸ್ಥೆಯಲ್ಲೊಂದಾದ ಸಂತ ಫಿಲೋಮಿನಾ ಪದವಿ, ಸ್ನಾತಕೋತ್ತರ, ಪದವಿ ಪೂರ್ವ ಕಾಲೇಜಿನ ನಾಲ್ವರು ಉಪನ್ಯಾಸಕರು ಹಾಗೂ ಸ್ನಾತಕೋತ್ತರ ವಿಭಾಗದಿಂದ ಐದು ಮಂದಿ ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ.
ಕಾಲೇಜಿನ ಭೌತಶಾಸ್ತ್ರ ಸ್ನಾತಕೋತ್ತರ ವಿಭಾಗದ ಉಪನ್ಯಾಸಕರಾದ ಡಾ|ಪ್ರವೀಣ್ ಪ್ರಕಾಶ್ ಡಿ’ಸೋಜ, ಸ್ನಾತಕೋತ್ತರ ವಾಣಿಜ್ಯ ವಿಭಾಗದ ಉಪನ್ಯಾಸಕ ಪ್ರವೀಣ್, ಪದವಿ ಕಾಲೇಜಿನ ವಾಣಿಜ್ಯ ವಿಭಾಗದ ಉಪನ್ಯಾಸಕ ತೇಜಸ್ವಿ ಭಟ್ ಕೆ, ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ಉಪನ್ಯಾಸಕ ಸಂತೋಷ್ ಕ್ಲ್ಯಾರೆನ್ಸ್ ಡಿ’ಸೋಜ ಹಾಗೂ ಕಾಲೇಜಿನ ಭೌತಶಾಸ್ತ್ರ ಸ್ನಾತಕೋತ್ತರ ವಿಭಾಗದ ವಿದ್ಯಾರ್ಥಿನಿ ತುಷಾರ ಆರ್.ಬಿ, ಅರ್ಥಶಾಸ್ತ್ರ ಸ್ನಾತಕೋತ್ತರ ವಿಭಾಗದ ವಿದ್ಯಾರ್ಥಿನಿ ವರಲಕ್ಷ್ಮೀ ಎಂ.ಎಲ್, ವಾಣಿಜ್ಯಶಾಸ್ತ್ರ ಸ್ನಾತಕೋತ್ತರ ವಿಭಾಗದ ವಿದ್ಯಾರ್ಥಿನಿ, ಪ್ರಸ್ತುತ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ಉಪನ್ಯಾಸಕಿಯಾಗಿರುವ ಜೊಶಿಲಾ ಮಾರಿಟಾ ಮಿನೇಜಸ್, ಶ್ರಾವ್ಯ ಕೆ, ನಿರೀಶ್ಮಾ ಎನ್.ಸುವರ್ಣರವರು ತೇರ್ಗಡೆಯಾಗಿದ್ದಾರೆ ಎಂದು ಫಿಲೋಮಿನಾ ಪದವಿ ಕಾಲೇಜು, ಸ್ನಾತಕೋತ್ತರ ವಿಭಾಗ ಹಾಗೂ ಪದವಿ ಪೂರ್ವ ಕಾಲೇಜಿನ ಪ್ರಕಟಣೆ ತಿಳಿಸಿದೆ.