ಪುತ್ತೂರು: ರಾಜ್ಯ ಸರ್ಕಾರದ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಿಂದ ಉದ್ಯಮ ಶೀಲತೆ ಯೋಜನೆಯಡಿ ಮಂಜೂರಾದ ಅರ್ಹ ಫಲಾನುಭವಿಗಳಿಗೆ ಸಹಾಯಧನ ಮತ್ತು ಬ್ಯಾಂಕ್ ಸಾಲ ಸೌಲಭ್ಯದ ಪ್ರಮಾಣ ಪತ್ರ ಶಾಸಕ ಶ್ರೀ ಸಂಜೀವ ಮಠಂದೂರು ರವರು ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಪುತ್ತೂರು ತಾಲೂಕು ಪಂಚಾಯತ್ ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್, ತಾಲೂಕು ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ ನವೀನ್ ಭಂಡಾರಿ, ನಿಗಮದ ಅಧಿಕಾರಿ ಶಿವರಾಮ ಹಾಗೂ ಫಲಾನುಭವಿಗಳು ಉಪಸ್ಥಿತರಿದ್ದರು.