ಪುತ್ತೂರು: ಸ್ವಾಮಿ ವಿವೇಕಾನಂದರು ಜಗತ್ತು ಕಂಡ ಅಪ್ರತಿಮ ಸಂತ.ಭಾರತೀಯರ ನೈಜ ಸಂಸ್ಕೃತಿ ಹಾಗೂ ಸಮಾಜವನ್ನು ಇಡೀ ವಿಶ್ವಕ್ಕೆ ಪರಿಚಯಿಸಿದ ಕೀರ್ತಿ ಅವರಿಗೆ ಸಲ್ಲಬೇಕು, ಎಂದು ಸಂಚಾಲಕ ಅವಿನಾಶ್ ಕೊಡಂಕಿರಿ ಹೇಳಿದರು. ಅವರು ಸರಸ್ವತಿ ವಿದ್ಯಾಮಂದಿರದಲ್ಲಿ ನಡೆದ ವಿವೇಕಾನಂದ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಪ್ರಾಂಶುಪಾಲ ರಾಜಾರಾಮ ವರ್ಮ ವಿಟ್ಲ ಸ್ವಾಗತಿಸಿದರು. ಶಿಕ್ಷಕಿ ಶರಣ್ಯಾ ವಂದಿಸಿದರು. ಆಡಳಿತಾಧಿಕಾರಿ ಶುಭಾ ಅವಿನಾಶ್ ಉಪಸ್ಥಿತರಿದ್ದರು.