ಪುತ್ತೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ರಾಜ್ಯ ಸಚಿವ ಸಂಪುಟಕ್ಕೆ ಸೇರ್ಪಡೆಗೊಳ್ಳಲಿರುವ ಸುಳ್ಯ ಶಾಸಕ ಎಸ್.ಅಂಗಾರವರನ್ನು ಬೆಂಗಳೂರಿನಲ್ಲಿನ ಶಾಸಕರ ಕಚೇರಿಯಲ್ಲಿ ಭೇಟಿ ಮಾಡಿದ ಕಡಬ ತಾ.ಪಂ.ಸದಸ್ಯೆ ತೇಜಸ್ವಿನಿಶೇಖರ ಗೌಡರವರು ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ಪ್ರಸಾದವನ್ನು ಎಸ್.ಅಂಗಾರರವರ ಹಣೆಗೆ ಇಟ್ಟು ಶುಭಹಾರೈಸಿದರು. ತೇಜಸ್ವಿನಿಯವರ ಜೊತೆಗೆ ಬಿಜೆಪಿ ಕಾರ್ಯಕರ್ತರಾದ ಗಣೇಶ್ ಬೊಟ್ಟಿಮಜಲು, ರಘುಪಾಲೇರಿ, ಮೂಲಚಂದ್ರ ಉಪಸ್ಥಿತರಿದ್ದರು. ಸುಳ್ಯ ವಿಧಾನಸಭಾ ಕ್ಷೇತ್ರದಿಂದ ಸತತ ೬ನೇ ಬಾರಿ ಶಾಸಕರಾಗಿ ಚುನಾಯಿತರಾಗಿರುವ ಎಸ್.ಅಂಗಾರರವರು ಮೊದಲ ಬಾರಿಗೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಅಂಗಾರರವರು ಪ್ರಮಾಣವಚನ ಸ್ವೀಕರಿಸಲಿರುವ ಸಮಾರಂಭವನ್ನು ಕಣ್ತುಂಬಿಸಿಕೊಳ್ಳಲು ಅವರ ಬೆಂಬಲಿಗರು, ಅಭಿಮಾನಿಗಳು, ಪಕ್ಷದ ಮುಖಂಡರು ಬೆಳ್ಳಂಬೆಳಿಗ್ಗೆಯೇ ಬೆಂಗಳೂರಿಗೆ ತೆರಳಿದ್ದಾರೆ. ಶಾಸಕರ ಕಚೇರಿಯಲ್ಲಿ ಎಸ್.ಅಂಗಾರ ಅವರನ್ನು ಭೇಟಿ ಮಾಡಿ ಶುಭಹಾರೈಸುತ್ತಿದ್ದಾರೆ.