ಪುತ್ತೂರು: ೨೦೨೧-೨೦೨೨ನೇ ಸಾಲಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ನಡೆಸುತ್ತಿರುವ ದಕ್ಷಿಣ ಕನ್ನಡ ಜಿಲ್ಲಾ ಕ್ರೀಡಾ ನಿಲಯಕ್ಕೆ ಅರ್ಹ ಕ್ರೀಡಾಪುಟುಗಳನ್ನು ಆಯ್ಕೆ ಮಾಡುವ ಪ್ರಕ್ರಿಯೆ ಜಿಲ್ಲೆಯ ವಿವಿಧ ತಾಲೂಕು ಕೇಂದ್ರಗಳಲ್ಲಿ ನಡೆಯುತ್ತಿದ್ದು, ಜ.19ರಂದು ಪುತ್ತೂರು ಕೊಂಬೆಟ್ಟಿನಲ್ಲಿರುವ ತಾಲೂಕು ಕ್ರೀಡಾಂಗಣದಲ್ಲಿಯೂ ಆಯ್ಕೆ ಪ್ರಕ್ರಿಯೆ ನಡೆಯಲಿದೆ.
೨೦೨೧-೨೦೨೨ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ೫ನೇ ತರಗತಿಗೆ ಮತ್ತು ೮ನೇ ತರಗತಿಗೆ ಸೇರ್ಪಡೆಗೊಳ್ಳಲು ಸೂಕ್ತ ನಿಯಮಗಳಿದ್ದು, ಇಲಾಖೆಯ ನಾರ್ಮ್ಸ್ ಪ್ರಕಾರ ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾದ ಕ್ರೀಡಾಪಟುಗಳಿಗೆ ದಕ್ಷಿಣ ಕನ್ನಡ ಜಿಲ್ಲಾ ಕ್ರೀಡಾ ನಿಯಕ್ಕೆ ಪ್ರವೇಶ ನೀಡಲಾಗುವುದು. ಅಥ್ಲೆಟಿಕ್ಸ್ ಮತ್ತು ವಾಲಿಬಾಲ್ ಕ್ರೀಡೆಗಳಿಗೆ ಆಯ್ಕೆ ನಡೆಸಲಾಗುತ್ತದೆ. ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸುವ ಬಾಲಕ/ಬಾಲಕಿಯರು ಜನ್ಮ ದಿನಾಂಕ ಪ್ರಮಾಣಪತ್ರ, ಕ್ರೀಡಾಸಾಧನೆಯ ದಾಖಲೆಗಳು ಹಾಗು ಇತರೆ ದಾಖಲೆಗಳನ್ನು ಹಾಜರುಪಡಿಸಬೇಕು. ಹೆಚ್ಚಿನ ವಿವರಗಳಿಗೆ ಉಪ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ ಇವರ ಕಚೇರಿ ದೂರವಾಣಿ ಸಂಖ್ಯೆ ೦೮೨೪-೨೪೫೧೨೬೪ ಅಥವಾ ಆಯಾ ತಾಲೂಕಿನ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕರನ್ನು ಮತ್ತು ತಾಲೂಕಿನ ಸಹಾಯಕ ಯುವ ಸಬಲೀಕರಣ ಮತ್ತು ಕ್ರೀಡಾಧಿಕಾರಿಯವರನ್ನು ಸಂಪರ್ಕಿಸುವಂತೆ ತಾಲೂಕು ಯುವ ಸಬಲೀಕರಣ ಮತ್ತು ಕ್ರೀಡಾಧಿಕಾರಿ ಜಯರಾಮ ಗೌಡ ಅವರು ತಿಳಿಸಿದ್ದಾರೆ.