ಕಾಣಿಯೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬೆಳಂದೂರು ಇಲ್ಲಿನ ಆಂತರಿಕ ಗುಣಮಟ್ಟ ಭರವಸಾ ಕೋಶ ಮತ್ತು ಎನ್ ಎಸ್ ಎಸ್ ಘಟಕದ ಸಹಯೋಗದಲ್ಲಿ 2020-21 ನೇ ಶೈಕ್ಷಣಿಕ ವರ್ಷದ ಎನ್ಎಸ್ಎಸ್ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಅಭಿವಿನ್ಯಾಸ ಹಮ್ಮಿಕೊಳ್ಳಲಾಯಿತು. ಬೆಟ್ಟಂಪಾಡಿ ಸ.ಪ್ರ.ದ.ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ದಾಮೋದರ ಕಣಜಾಲು ಉದ್ಘಾಟಕರಾಗಿ ಮತ್ತು ಸಂಪನ್ಮೂಲ ವ್ಯಕ್ತಿಗಳಾಗಿ ಅವರು ಆಗಮಿಸಿ ವಾರ್ಷಿಕ ಚಟುವಟಿಕೆಗಳಿಗೆ ದೀಪ ಬೆಳಗಿಸುವುದರ ಮೂಲಕ ಚಾಲನೆ ನೀಡಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತಾನಾಡಿದ ಅವರು ಎನ್ ಎಸ್ ಎಸ್ ನ ಹುಟ್ಟು ಬೆಳವಣಿಗೆ ಅದರ ಆದರ್ಶಗಳು ಮೌಲ್ಯಗಳ ಬಗ್ಗೆ ಸವಿವರವಾಗಿ ತಿಳಿಸಿ ಭವಿಷ್ಯವನ್ನು ಉತ್ತಮಪಡಿಸಿಕೊಳ್ಳಲು ಎನ್ ಎಸ್ ಎಸ್ ಸಮೃದ್ಧ ಅವಕಾಶಗಳನ್ನು ಒದಗಿಸಿಕೊಡುವುದಲ್ಲದೆ ವ್ಯಕ್ತಿತ್ವದ ವಿಕಾಸನಕ್ಕೂ ಕಾರಣವಾಗವ ಬಗೆಯನ್ನು ಉದಾಹರಣೆಗಳ ಸಹಿತ ಮನದಟ್ಟು ಮಾಡಿ ಸಕ್ರಿಯವಾಗಿ ಎನ್ ಎಸ್ ಎಸ್ ಚಟುವಟಿಕಗಳಲ್ಲಿ ಭಾಗವಹಿಸಲು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಪ್ರಾಂಶುಪಾಲರಾದ ಪದ್ಮನಾಭ.ಕೆ ರವರು ಅಧ್ಯಕ್ಷೀಯ ನುಡಿಗಳನ್ನಾಡಿದರು. ಎನ್ ಎಸ್ ಎಸ್ ಸಂಯೋಜನಾಧಿಕಾರಿ ಸ್ವಾಮಿ.ಎಸ್ ಬೈಲಕುಪ್ಪ ಸ್ವಾಗತಿಸಿ ಉದ್ಘಾಟಕರನ್ನು ಪರಿಚಯಿಸಿದರು. ರಶ್ಮಿಮತ್ತು ಸುಮಲತಾ ರಾ.ಸೇ.ಯೋಜನೆ ಗೀತೆ ಹಾಡಿದರು ಶೋಭ ವಂದಿಸಿದರು .ಉಪನ್ಯಾಸಕ ಮತ್ತು ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.