ನೆಲ್ಯಾಡಿ: ಸುಳ್ಯ ಶಾಸಕ ಎಸ್.ಅಂಗಾರರವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ರಾಜ್ಯ ಸಚಿವ ಸಂಪುಟಕ್ಕೆ ಸೇರ್ಪಡೆಗೊಂಡಡ ಹಿನ್ನೆಲೆಯಲ್ಲಿ ನೆಲ್ಯಾಡಿಯಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು. ನೆಲ್ಯಾಡಿ ಗ್ರಾ.ಪಂ.ಸದಸ್ಯ ರವಿಪ್ರಸಾದ್ ಶೆಟ್ಟಿ ರಾಮನಗರ, ಪ್ರಕಾಶ್, ಕೌಕ್ರಾಡಿ ಗ್ರಾ.ಪಂ.ಸದಸ್ಯರಾದ ಲೋಕೇಶ್ ಬಾಣಜಾಲು, ಸುಧಾಕರ ಜಿ., ಉದಯಕುಮಾರ್ ದೋಂತಿಲ, ತಾ.ಪಂ.ಮಾಜಿ ಸದಸ್ಯೆ ಬೇಬಿಸದಾನಂದ, ಪ್ರಮುಖರಾದ ರಮೇಶ್ ಶೆಟ್ಟಿ ಬೀದಿ, ಅಣ್ಣಿ ಎಲ್ತಿಮಾರ್, ಸದಾನಂದ ಕುಂಡಡ್ಕ ಮತ್ತಿತರರು ಉಪಸ್ಥಿತರಿದ್ದರು.