ನೆಲ್ಯಾಡಿ: ಸಂತ ಜಾರ್ಜ್ ಪ.ಪೂ.ಕಾಲೇಜು ನೆಲ್ಯಾಡಿ ಇದರ ಎನ್ನೆಸ್ಸೆಸ್ ಘಟಕದ ವತಿಯಿಂದ ರಾಷ್ಟ್ರೀಯ ಯುವದಿನ ವಿವೇಕ ಜಯಂತಿಯನ್ನು ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲ ಏಲಿಯಾಸ್ ಎಂ.ಕೆ.ರವರ ಮಾರ್ಗದರ್ಶನದಲ್ಲಿ ಕಾರ್ಯಕ್ರಮ ನಡೆಯಿತು. ಸಂತ ಜಾರ್ಜ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯಗುರು ಹರಿಪ್ರಸಾದ್ರವರು ವಿದ್ಯಾರ್ಥಿಗಳಿಗೆ ಸ್ವಾಮಿ ವಿವೇಕಾನಂದರ ಜೀವನದ ಘಟನೆಗಳನ್ನು ವಿವರಿಸಿ ಸ್ಪೂರ್ತಿ ತುಂಬಿದರು. ಎನ್ನೆಸ್ಸೆಸ್ ಕಾರ್ಯಕ್ರಮಾಧಿಕಾರಿ ವಿಶ್ವನಾಥ ಶೆಟ್ಟಿ ಹಾಗೂ ಉಪನ್ಯಾಸಕರು, ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.