ಪುತ್ತೂರು: ಕೆಯ್ಯೂರು ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಸತತ ನಾಲ್ಕನೇ ಬಾರಿಗೆ ಗ್ರಾಪಂ ಸದಸ್ಯರಾಗಿ ಗೆಲುವು ಕಂಡಿರುವ, ಸೋಲಿಲ್ಲದ ಸರದಾರ ಎಂದೇ ಪ್ರಸಿದ್ಧಿ ಪಡೆದುಕೊಂಡಿರುವ ಅಬ್ದುಲ್ ಖಾದರ್ ಮೇರ್ಲರವರನ್ನು ಕರ್ನಾಟಕ ಮುಸ್ಲಿಂ ಜಮಾಅತ್ ಪುತ್ತೂರು ತಾಲೂಕು ಸಮಿತಿ ವತಿಯಿಂದ ಗೌರವಿಸಲಾಯಿತು. ತಾಲೂಕು ಸಮಿತಿಯ ಸಭೆಯಲ್ಲಿ ಮೇರ್ಲರವರನ್ನು ಕರ್ನಾಟಕ ಮುಸ್ಲೀಂ ಜಮಾಅತ್ ಪುತ್ತೂರು ತಾಲೂಕು ಇದರ ಅಧ್ಯಕ್ಷ ಅಬ್ದುಲ್ ರಹೀಮಾನ್ ಹಾಜಿ ಅರಿಯಡ್ಕ, ಕಾರ್ಯದರ್ಶಿ ಇಸ್ಮಾಯಿಲ್ ಹಾಜಿ ಬೈತಡ್ಕ, ಕೋಶಾಧಿಕಾರಿ ಮಹಮ್ಮದ್ ಹಾಜಿ ಕುಕ್ಕುವಳ್ಳಿ ಹಾಗೂ ಕರ್ವೇಲ್ ತಂಞಳ್ರವರು ಶಾಲು ಹೊದಿಸಿ ಗೌರವಿಸಿದರು.
ಗೌರವ ಸ್ವೀಕರಿಸಿದ ಅಬ್ದುಲ್ ಖಾದರ್ ಮೇರ್ಲರವರು ಮಾತನಾಡಿ, ಸತತ ನಾಲ್ಕನೇ ಬಾರಿಗೆ ಕೆಯ್ಯೂರಿನ ಜನತೆ ನನ್ನನ್ನು ಪಂಚಾಯತ್ ಸದಸ್ಯನನ್ನಾಗಿ ಆಯ್ಕೆ ಮಾಡಿದ್ದಾರೆ.ಜನರ ಸಮಸ್ಯೆಗಳಿಗೆ ನನ್ನಿಂದ ಸಾಧ್ಯವಾಗುವ ರೀತಿಯಲ್ಲಿ ಸ್ಪಂದನೆ ನೀಡಿದ್ದೇನೆ ಮುಂದೆಯೂ ನೀಡುತ್ತೇನೆ. ಬಡವರ, ಗ್ರಾಮದ ಕಟ್ಟಕಡೆಯ ವ್ಯಕ್ತಿಗೂ ಸರಕಾರದ ಸಲವತ್ತುಗಳು ದೊರೆಯಬೇಕು, ಅವರೂ ಕೂಡ ಸಮಾಜದಲ್ಲಿ ಮುಂದೆ ಬರಬೇಕು ಎಂಬುದೇ ನನ್ನ ಆಸೆ ಎಂದು ಹೇಳಿ ಕೃತಜ್ಞತೆ ಸಲ್ಲಿಸಿದರು. ಇದೇ ಸಂದರ್ಭದಲ್ಲಿ ಗೆಲುವಿನ ಸಂಭ್ರಮಕ್ಕೆ ಸಿಹಿ ತಿಂಡಿ ಹಂಚಿದರು. ಸಭೆಯಲ್ಲಿ ಜಮಾಅತ್ನ ತಾಲೂಕು ಮತ್ತು ವಲಯ ಸಮಿತಿಯ ಪದಾಧಿಕಾರಿಗಳು, ಸದಸ್ಯರುಗಳು ಉಪಸ್ಥಿತರಿದ್ದರು.