ಪುತ್ತೂರು: ಧನುರ್ಮಾಸ ಪೂಜೆಯ ಕೊನೆಯ ದಿನ ಜ.14ರಂದು ಬೆಳಗ್ಗೆ ನಸುಕಿನ ಜಾವ ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಧನು ಪೂಜೆಯಲ್ಲಿ ಭಕ್ತರ ಸಂಖ್ಯೆ ಅಧಿಕವಾಗಿತ್ತು.
ಶಾಸಕ ಸಂಜೀವ ಮಠಂದೂರು ಸಹಿತ ಹಲವಾರು ಮಂದಿ ಪ್ರಮುಖರು ಧನು ಪೂಜೆಯಲ್ಲಿ ಪಾಲ್ಗೊಂಡರು. ಪೂಜೆಯ ಬಳಿಕ ದೇವಳದ ಹೊರಾಂಗಣದಲ್ಲಿ ಭಕ್ತರಿಗೆ ಫಲಾರದ ವ್ಯವಸ್ಥೆ ಕಲ್ಪಿಸಲಾಗಿತ್ತು.