ಪುತ್ತೂರು: ಕೊಳ್ತಿಗೆ ಗ್ರಾಮದ ಬಾಯಂಬಾಡಿ ಶ್ರೀ ಷಣ್ಮುಖದೇವ ದೇವಸ್ಥಾನದಲ್ಲಿ ಬ್ರಹ್ಮಶ್ರೀ ವೇ.ಮೂ. ಕೆಮ್ಮಿಂಜೆ ನಾಗೇಶ್ ತಂತ್ರಿ ಯವರ ನೇತೃತ್ವದಲ್ಲಿ ಜ.20ರಿಂದ ಜ.23ರವರೆಗೆ ನಡೆಯಲಿರುವ ವರ್ಷಾವಧಿ ಜಾತ್ರಾ ಮಹೋತ್ಸವಕ್ಕೆ ಜ.14ರಂದು ಗೊನೆ ಮುಹೂರ್ತ ನಡೆಯಿತು. ದೇವಸ್ಥಾನದ ಪ್ರಧಾನ ಅರ್ಚಕ ಜಯರಾಮ ಬಡೆಕ್ಕಿಲ್ಲಾಯ ರವರು ಗೊನೆ ಮುಹೂರ್ತದ ವಿಧಿ ವಿಧಾನವನ್ನು ನೆರವೇರಿಸಿದರು. ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ನೇಮಿರಾಜ ಪಾಂಬರು, ಸಮಿತಿಯ ಸದಸ್ಯರು, ಊರ ಭಕ್ತಾದಿಗಳು ಉಪಸ್ಥಿತರಿದ್ದರು.