ಪುತ್ತೂರು: ಕರ್ನಾಟಕ ರಾಜ್ಯ ಸರಕಾರದ ಕ್ಯಾಬಿನೆಟ್ ದರ್ಜೆ ಸಚಿವರಾಗಿ ಜ.13ರಂದು ಪ್ರಮಾಣವಚನ ಸ್ವೀಕಾರ ಮಾಡಿರುವ ಸುಳ್ಯ ಶಾಸಕ ಎಸ್.ಅಂಗಾರರವರನ್ನು ಜ.14ರಂದು ಬೆಂಗಳೂರಿನಲ್ಲಿ ಭೇಟಿ ಮಾಡಿದ ಕೇಂದ್ರದ ಸಚಿವ, ಸುಳ್ಯದವರಾಗಿರುವ ಡಿ.ವಿ.ಸದಾನಂದ ಗೌಡರವರು ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದರು. ಸದಾನಂದ ಗೌಡರವರ ಪತ್ನಿ ಡಾಟಿ ಸದಾನಂದ ಗೌಡ ಮತ್ತು ಕೋಡಿಂಬಾಡಿ ರೈ ಎಸ್ಟೇಟ್ ಮಾಲಕರಾದ ಉದ್ಯಮಿ ಅಶೋಕ್ ಕುಮಾರ್ ರೈಯವರೂ ಈ ಸಂದರ್ಭದಲ್ಲಿ ಅಂಗಾರರವರನ್ನು ಅಭಿನಂದಿಸಿ ಶುಭ ಕೋರಿದರು. ಪುತ್ತೂರು ಎಪಿಎಂಸಿ ಮಾಜಿ ಅಧ್ಯಕ್ಷ ಕೃಷ್ಣ ಶೆಟ್ಟಿ ಕಡಬ ಮತ್ತಿತರರು ಉಪಸ್ಥಿತರಿದ್ದರು.