ಪುತ್ತೂರು; ಸತತ ಆರನೇ ಬಾರಿಗೆ ಸುಳ್ಯದ ಶಾಸಕರಾಗಿ ಚುನಾಯಿತರಾಗಿ, ರಾಜ್ಯ ಸಚಿವ ಸಂಪುಟದ ಕನ್ನಡ ಮತ್ತು ಸಂಸ್ಕೃತಿ ಇಲಾಖಾ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಸಚಿವ ಎಸ್. ಅಂಗಾರರವರು ಪ್ರಥಮ ಬಾರಿಗೆ ಪುತ್ತೂರಿಗೆ ಭೇಟಿ ನೀಡಿದರು.
ಮಂಗಳೂರಿನಿಂದ ಪುತ್ತೂರಿಗೆ ಆಗಮಿಸಿದ ಅವರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಬೆಂಗಳೂರಿನಿಂದ ವಿಮಾನದಲ್ಲಿ ಆಗಮಿಸಿದ ಸಚಿವ ಅಂಗಾರರವರು ಮಂಗಳೂರು ಬಜ್ಪೆ ವಿಮಾನ ನಿಲ್ದಾಣದಿಂದ ನೇರವಾಗಿ ಕದ್ರಿ ಮಂಜುನಾಥ ದೇವಸ್ಥಾನ ಭೇಟಿ ಪೂಜೆ ಸಲ್ಲಿಸಿದರು. ಬಳಿಕ ಅಲ್ಲಿಂದ ಸಂಘನಿಕೇತನ, ಬಿಜೆಪಿ ಜಿಲ್ಲಾ ಕಚೇರಿ, ಕಲ್ಲಡ್ಕ ರಾಮ ಮಂದಿರ ಭೇಟಿ ನೀಡಿದ ಅವರು ಬಳಿಕ ಪುತ್ತೂರಿಗೆ ಭೇಟಿ ನೀಡಿದರು.
ಸಹಾಯಕ ಆಯುಕ್ತ ರು, ದೇವಸ್ಥಾನದ ಆಡಳಿತಾಧಿಕಾರಿಯಾಗಿರುವ ಡಾ.ಯತೀಶ್ ಉಳ್ಳಾಲ್, ಶಾಸಕ ಸಂಜೀವ ಮಠಂದೂರು, ತಾ.ಪಂ ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್, ಸ್ಥಾಯಿ ಸಮಿತಿ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ ಮೊದಲಾದವರು ಹೂ ಹಾರ, ಶಾಲು, ಹೂಗುಚ್ಚ ನೀಡಿ ಸ್ವಾಗತಿಸಿದರು. ಅರ್ಚಕ ವಸಂತ ಕೆದಿಲಾಯ ಪೂಜೆ ಸಲ್ಲಿಸಿ, ಪ್ರಸಾದ ವಿತರಿಸಿ ಗೌರವಿಸಿದರು.
ತಾ.ಪಂ ಸದಸ್ಯರಾದ ಹರೀಶ್ ಬಿಜತ್ರೆ, ಮುಕುಂದ, ಜಿ.ಪಂ ಸದಸ್ಯರಾದ ಆಶಾ ತಿಮ್ಮಪ್ಪ, ಪ್ರಮೀಳಾ ಜನಾರ್ದನ, ಕಡಬ ತಾ.ಪಂ ಅಧ್ಯಕ್ಷೆ ರಾಜೇಶ್ವರಿ, ನಗರ ಸಭಾ ಅಧ್ಯಕ್ಷ ಜೀವಂಧರ್ ಜೈನ್, ಉಪಾಧ್ಯಕ್ಷೆ ವಿದ್ಯಾಗೌರಿ, ಗೌರಿ ಬನ್ನೂರು, ಪಿ.ಜಿ ಜಗನ್ನಿವಾಸ ರಾವ್, ಪಿ.ಎಲ್.ಡಿ ಬ್ಯಾಂಕ್ ಅಧ್ಯಕ್ಷ ಭಾಸ್ಕರ ಎಸ್ ಗೌಡ ಇಚ್ಲಂಪಾಡಿ, ಪೂಡಾದ ಅಧ್ಯಕ್ಷ ಭಾಮಿ ಅಶೋಕ್ ಶೆಣೈ, ಬಿಜೆಪಿ ಹಿಂದುಳಿದ ವರ್ಗಗಳ ಮೊರ್ಚಾದ ಜಿಲ್ಲಾಧ್ಯಕ್ಷ ಆರ್.ಸಿ ನಾರಾಯಣ, ಯತೀಂದ್ರ ಕೊಚ್ಚಿ, ನಗರ ಮಂಡಲ ಯುವ ಮೋರ್ಚಾದ ಅಧ್ಯಕ್ಷ ಸಚಿನ್ ಶೆಣೈ, ಭಾಸ್ಕರ ಕಂಟ್ರಮಜಲು, ಒಳಮೊಗ್ರು ಗ್ರಾ.ಪಂ ಸದಸ್ಯ ಮಹೇಶ್ ರೈ ಕೇರಿ, ಎಪಿಎಂಸಿ ಅಧ್ಯಕ್ಷ ದಿನೇಶ್ ಮೆದು, ಸದಸ್ಯರಾದ ಬಾಲಕೃಷ್ಣ ಬಾಣಜಾಲು, ಬೂಡಿಯಾರ್ ರಾಧಾಕೃಷ್ಣ ರೈ, ಬಿಜೆಪಿ ಮಂಡಲದ ಪ್ರಧಾನ ಕಾರ್ಯದರ್ಶಿ ನಿತೀಶ್ ಕುಮಾರ್ ಶಾಂತಿವನ , ರಾಮದಾಸ ಹಾರಾಡಿ, ಸುಳ್ಯ ನಗರ ಪಂಚಾಯತ್ ಅಧ್ಯಕ್ಷ ವಿನಯ ಕುಮಾರ್ ಕಂದಡ್ಕ, ಸುಳ್ಯ ಮಂಡಲದ ಪ್ರಧಾನ ಕಾರ್ಯದರ್ಶಿ ರಾಕೇಶ್ ರೈ ಕೆಡೆಂಜಿ, ಚನಿಲ ತಿಮ್ಮಪ್ಪ ಶೆಟ್ಟಿ, ಕೋಡಿಂಬಾಡಿ ಗ್ರಾ.ಪಂ ಸದಸ್ಯ ರಾಮಣ್ಣ ಗೌಡ ಗುಂಡೋಳೆ, ರಾಜೇಶ್ ರೈ ಪರ್ಪುಂಜ, ಅಭಿಜಿತ್ ಕೊಳಕ್ಕಿಮಾರ್, ಇಂದುಶೇಖರ, ಮಂಜುನಾಥ ಆಚಾರ್ಯ, ಜಯಂತ ಶೆಟ್ಟಿ ಕಂಬಳತ್ತಡ್ಡ, ಯುವರಾಜ ಪೆರಿಯತ್ತೋಡಿ, ಮೋಹನ್ ಪಕ್ಕಳ ಕುಂಡಾಪು, ತಹಶಿಲ್ದಾರ್ ರಮೇಶ್ ಬಾಬು, ತಾ.ಪಂ ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ, ಪೌರಾಯುಕ್ತೆ ರೂಪಾ ಶೆಟ್ಟಿ ಸೇರಿದಂತೆ ಹಲವು ಮಂದಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು