ವಿಟ್ಲ: ಕೋಲ್ಪೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಯವರ ನೇತೃತ್ವದಲ್ಲಿ ಜ.೧೭ರಿಂದ ಜ.೧೯ರವರೆಗೆ ನಡೆಯಲಿರುವ ವರ್ಷಾವಧಿ ಜಾತ್ರೋತ್ಸವದ ಅಂಗವಾಗಿ ಜ.೧೬ರಂದು ಬೆಳಿಗ್ಗೆ ಉಗ್ರಾಣ ಮುಹೂರ್ತ ನಡೆಯಿತು.
ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಸುರೇಶ್ ಕೆ.ಎಸ್. ಮುಕ್ಕುಡ, ಸದಸ್ಯರಾದ ಪ್ರಕಾಶ್ ಕೆ.ಎಸ್.ಉರಿಮಜಲು, ವಿಜಯಕುಮಾರ್ ಗೌಡ ಸೂರ್ಯ, ಚಂದ್ರಶೇಖರ ಕಂಬಳಿ ಅರ್ಕೆಚ್ಚಾರು, ದೇಜಪ್ಪ ಕೋಲ್ಪೆ, ವಿ.ಕೆ.ಕುಟ್ಟಿ ಉರಿಮಜಲು, ಉಷ ಮುಂಡ್ರಬೈಲು, ಶಶಿಪ್ರಭ ಮಿತ್ತೂರು, ರಾಜಾರಾಮ ಶೆಟ್ಟಿ ಕೋಲ್ಪೆಗುತ್ತು. ಇಡ್ಕಿದು ಗ್ರಾ.ಪಂ ಸದಸ್ಯ ಪುರುಷೋತ್ತಮ ಕೋಲ್ಪೆ ಸಹಿತ ಗ್ರಾಮಸ್ಥರು ಉಪಸ್ಥಿತರಿದ್ದರು. ದೇವಾಲಯದ ಪ್ರಧಾನ ಅರ್ಚಕರಾದ ಗೋವಿಂದ ಜೋಯಿಷರವರು ವಿಧಿವಿಧಾನವನ್ನು ನೆರವೇರಿಸಿದರು.