HomePage_Banner
HomePage_Banner
HomePage_Banner
HomePage_Banner

ಪ್ರತಿಭಟನೆ- ಸಂಘಟನೆಯೊಂದಿಗೆ ಕಾಂಗ್ರೆಸ್ ಬಲಪಡಿಸಬೇಕು: ಎಂ.ಎಸ್. ಮುಹಮ್ಮದ್

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1


ಉಪ್ಪಿನಂಗಡಿ: ನಮ್ಮೊಳಗಿನ ಒಗ್ಗಟ್ಟಿನ ಕೊರತೆಯೇ ಕಾಂಗ್ರೆಸ್ ಪಕ್ಷದ ಸೋಲಿಗೆ ಕಾರಣವಾಗಿದ್ದು, ಪ್ರತಿಭಟನೆ ಮತ್ತು ಪಕ್ಷ ಸಂಘಟನೆಗೆ ಒತ್ತು ನೀಡುವ ಮೂಲಕ ಜಾತ್ಯಾತೀತ ಪಕ್ಷವಾದ ಕಾಂಗ್ರೆಸ್ಸನ್ನು ಬಲಪಡಿಸುವ ಕಾರ್ಯ ಮಾಡಬೇಕು ಎಂದು ಜಿ.ಪಂ. ಸದಸ್ಯ ಎಂ.ಎಸ್. ಮುಹಮ್ಮದ್ ಹೇಳಿದರು.

ಇತ್ತೀಚೆಗೆ ನಡೆದ ಗ್ರಾ.ಪಂ. ಚುನಾವಣೆಯಲ್ಲಿ ಗೆದ್ದ ಹಾಗೂ ಸ್ಪರ್ಧಿಸಿ ಸೋತ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಿಗೆ ವಿಟ್ಲ – ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಉಪ್ಪಿನಂಗಡಿಯ ರೋಟರಿ ಭವನದಲ್ಲಿ ಶನಿವಾರ ನಡೆದ ಅಭಿನಂದನಾ ಕಾರ್ಯಕ್ರಮವನ್ನುದ್ದೇಶಿಸಿ ಅವರು ಮಾತನಾಡುತ್ತಿದ್ದರು.

ಸ್ಪರ್ಧೆಯೆಂದರೆ ಸೋಲು- ಗೆಲುವು ಇದ್ದದ್ದೆ. ಆದ್ದರಿಂದ ಸೋತವರು ಎದೆಗುಂದಬಾರದು. ನಮ್ಮೊಳಗಿನ ಭಿನ್ನಮತಗಳನ್ನು ಮರೆತು ಕಾಂಗ್ರೆಸ್ ಪಕ್ಷದ ಸಂಘಟನೆಗಾಗಿ ಒಂದಾಗಿ ಇಚ್ಛಾಶಕ್ತಿಯ ಹೋರಾಟ ನಡೆಸಬೇಕು. ಕಾಂಗ್ರೆಸ್ ಪಕ್ಷದಿಂದ ಗೆದ್ದು ಅಧಿಕಾರ ಅನುಭವಿಸಿದವರಿಗೆ ಪಕ್ಷದ ಋಣವಿದ್ದು, ಅಧಿಕಾರದ ವ್ಯಾಮೋಹಕ್ಕೆ ಬಲಿಯಾಗದೇ ಜನರಿಗೆ ಉತ್ತಮ ಸೇವೆ ನೀಡುವ ಮೂಲಕ ಪಕ್ಷವನ್ನು ಬಲಾಢ್ಯಗೊಳಿಸುವ ಕಾರ್ಯ ಮಾಡಬೇಕು. ಈಗ ಅಧಿಕಾರದಲ್ಲಿರುವ ಬಿಜೆಪಿಯು ಜನಸಾಮಾನ್ಯರನ್ನು ಕಡೆಗಣಿಸುತ್ತಿದ್ದು, ಅನ್ನ ಭಾಗ್ಯ ಯೋಜನೆಯ ಅಕ್ಕಿ ಕಡಿತಗೊಳಿಸಿರುವುದು, ಇಂದಿರಾ ಕ್ಯಾಂಟೀನ್ ಮುಚ್ಚುವಂತಹ ಕಾರ್ಯ ಸೇರಿದಂತೆ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದಾಗ ಜಾರಿಗೆ ತಂದ ಹಲವು ಜನಪರ ಯೋಜನೆಗಳನ್ನು ನಿಲ್ಲಿಸಿದೆ. ಬಿಜೆಪಿ ಅಧಿಕಾರದಲ್ಲಿಂದು ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಬೆಲೆ ಗಗನಕ್ಕೇರಿದೆ. ಆದ್ದರಿಂದ ನಾವೆಲ್ಲಾ ಬಿಜೆಪಿ ಸರಕಾರದ ಜನವಿರೋಧಿ ನೀತಿಯನ್ನು ಜನರ ತೆಗೆದುಕೊಂಡು ಹೋಗಬೇಕಿದೆ. ಪ್ರತಿಭಟನೆ ಹಾಗೂ ಪಕ್ಷ ಸಂಘಟನೆಗೆ ಒತ್ತು ನೀಡುವ ಮೂಲಕ ಪಕ್ಷವನ್ನು ಬೆಳೆಸುವುದಕ್ಕಾಗಿ ನಿಷ್ಠಾವಂತ ಕಾರ್ಯಕರ್ತರಾಗಿ ದುಡಿಯಬೇಕು ಎಂದರು.

ಪುತ್ತೂರು ರಬ್ಬರ್ ಸೊಸೈಟಿ ಅಧ್ಯಕ್ಷ ಪ್ರಸಾದ್ ಕೌಶಲ್ ಶೆಟ್ಟಿ ಬೆಳ್ಳಿಪ್ಪಾಡಿ ಮಾತನಾಡಿ, ಸರ್ವ ಧರ್ಮದವರಿಗೆ ಅಧಿಕಾರ ನೀಡಿರುವ ಪಕ್ಷವೊಂದಿದ್ದರೆ ಅದು ಕಾಂಗ್ರೆಸ್ ಪಕ್ಷ. ಇದರ ಋಣ ತೀರಿಸುವ ಕೆಲಸ ಎಲ್ಲರಿಂದ ಆಗಬೇಕಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ವಿಟ್ಲ- ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುರಳೀಧರ ಶೆಟ್ಟಿ ಮಠಂತಬೆಟ್ಟು ಮಾತನಾಡಿ, ಅಧಿಕಾರ ಪಡೆದ ಬಳಿಕ ನಾಯಕರ ಅಹಂ, ಕಾರ್ಯಕರ್ತರ ಕಡೆಗಣನೆಯೇ ಕಾಂಗ್ರೆಸ್‌ನ ಇಂದಿನ ಸ್ಥಿತಿಗೆ ಕಾರಣ. ನಮ್ಮ ಗೆಲುವಿಗಾಗಿ ಬೆವರು ಸುರಿಸಿ ದುಡಿಯುವವರು ಕಾರ್ಯಕರ್ತರು. ಆದರೆ ಗೆದ್ದ ಬಳಿಕ ಪಕ್ಷದ ಹಿರಿಯರನ್ನು, ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ, ಒಗ್ಗೂಡಿಸುವ ಕಾರ್ಯ ಗೆದ್ದವರಿಂದ ಆಗಿರಲಿಲ್ಲ. ಅಧಿಕಾರ ಪಡೆದ ಬಳಿಕ ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ಆನೆ ನಡೆದದ್ದೇ ದಾರಿ ಎಂಬಂತೆ ನಡೆದದ್ದೆ ಗ್ರಾ.ಪಂ. ಚುನಾವಣೆಯಲ್ಲಿ ಕಾಂಗ್ರೆಸ್ ಹಿನ್ನಡೆಗೆ ಕಾರಣವಾಗಿದೆ ಎಂದರು.

ದ.ಕ. ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾಗಿ ನೇಮಕಗೊಂಡ ಶಾಹುಲ್ ಹಮೀದ್ ಅವರನ್ನು ಈ ಸಂದರ್ಭ ಸನ್ಮಾನಿಸಲಾಯಿತು ಹಾಗೂ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ ಅಬ್ದುರ್ರಹ್ಮಾನ್ ಯುನಿಕ್ ಅವರನ್ನು ಅಧಿಕೃತವಾಗಿ ಪಕ್ಷಕ್ಕೆ ಸೇರ್ಪಡೆಗೊಳಿಸಲಾಯಿತು.

ವೇದಿಕೆಯಲ್ಲಿ ಜಿ.ಪಂ. ಮಾಜಿ ಅಧ್ಯಕ್ಷ ಸೋಮನಾಥ, ಕಾಸರಗೋಡು ಜಿ.ಪಂ. ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಅರ್ಷದ್ ವರ್ಕಾಡಿ, ಕಾಂಗ್ರೆಸ್‌ನ ೩೪ ನೆಕ್ಕಿಲಾಡಿ ವಲಯಾಧ್ಯಕ್ಷ ಮೈಕಲ್ ವೇಗಸ್, ಉಪ್ಪಿನಂಗಡಿ ವಲಯಾಧ್ಯಕ್ಷ ಆದಂ ಕೊಪ್ಪಳ, ಯುವ ಕಾಂಗ್ರೆಸ್‌ನ ಪುತ್ತೂರು ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಯು.ಟಿ. ತೌಸೀಫ್, ಮುಖಂಡರಾದ ಈಸುಬು ಪೆದಮಲೆ, ಕೃಷ್ಣರಾವ್ ಆರ್ತಿಲ ಮತ್ತಿತರರು ಇದ್ದರು.

೩೪ ನೆಕ್ಕಿಲಾಡಿ ಗ್ರಾ.ಪಂ. ಮಾಜಿ ಸದಸ್ಯೆ ಅನಿ ಮಿನೇಜಸ್ ಮತ್ತು ಜಯಶೀಲ ತಂಡದವರು ನಾಡಗೀತೆ ಹಾಡಿದರು. ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರಾದ ಅಶ್ರಫ್ ಬಸ್ತಿಕ್ಕಾರ್ ಸ್ವಾಗತಿಸಿದರು. ಡಾ. ರಾಜಾರಾಮ್ ಕೆ.ಬಿ. ಕಾರ್ಯಕ್ರಮ ನಿರೂಪಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.