- ಕಾಂಗ್ರೆಸ್ ನ ಎಡ್ರಸ್ ಹುಡುಕುವ ದಿನ ಬರಲಿದೆ- ಡಿ.ವಿ.ಸದಾನಂದ ಗೌಡ
ಪುತ್ತೂರು: ಗ್ರಾ.ಪಂ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತರಾಗಿ ಸ್ಪರ್ಧಿಸಿ ವಿಜೇತರಾದವರಿಗೆ ಹಾಗೂ ಪರಾಜಿತರಾದವರಿಗೆ ಅಭಿನಂದನೆ ಸಲ್ಲಿಸುವ ಮತ್ತು ನೂತನ ಸಚಿವರಾದ ಸುಳ್ಯ ಶಾಸಕ ಎಸ್. ಅಂಗಾರರವರನ್ನು ಸನ್ಮಾನಿಸುವ ಕಾರ್ಯಕ್ರಮ ಬಿಜೆಪಿಯ ಜನಸೇವಕ ಸಮಾವೇಶದಲ್ಲಿ ನಡೆಯಿತು. ಜ.೧೯ರಂದು ಪುತ್ತೂರು ಸಾಲ್ಮರ ಕೊಟೇಚಾ ಹಾಲ್ ನಲ್ಲಿ ಕಾರ್ಯಕ್ರಮ ಜರಗಿತು.
ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಅವರು ಕಾರ್ಯಕ್ರಮ ಉದ್ಘಾಟಿಸಿದರು. ಬಳಿಕ ಮಾತನಾಡಿದ ಸದಾನಂದ ಗೌಡರವರು ಮಾತನಾಡಿ ಒಂದು ಭಾರಿ ಶಾಸಕರಾದವರು ಸಚಿವ ಸ್ಥಾನ ಕೇಳುವ ಕಾಂಗ್ರೆಸ್ ರಾಜಕಾರಣಕ್ಕೆ ಭಿನ್ನವಾಗಿ ಬಿಜೆಪಿ ಶಾಸಕ ಅಂಗಾರ ೬ ಭಾರಿ ಶಾಸಕರಾದರೂ ಇಲ್ಲಿನ ತನಕ ಸಚಿವ ಪಟ್ಟ ಕೇಳಿಲ್ಲ. ಇದು ನಿಜವಾದ ಜನಸೇವಕನ ನಡೆ ಎಂದರು. ಬಣ ರಾಜಕಾರಣದಿಂದಾಗಿ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ನ ಎಡ್ರಸ್ ಹುಡುಕುವ ದಿನ ಬರಲಿದೆ ಎಂದು ಅವರು ಹೇಳಿದರು.
ಶಾಸಕ ಸಂಜೀವ ಮಠಂದೂರು, ಮಾಜಿ ಶಾಸಕಿ ಮಲ್ಲಿಕಾ ಪ್ರಸಾದ್, ಜಿ.ಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ತಾ.ಪಂ ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್, ನಗರಸಭೆ ಅಧ್ಯಕ್ಷ ಜೀವಂಧರ್ ಜೈನ್, ಉಪಾಧ್ಯಕ್ಷೆ ವಿದ್ಯಾ ಗೌರಿ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಭಾಮಿ ಅಶೋಕ್ ಶೆಣೈ, ವಿಭಾಗ ಸಹಪ್ರಭಾರಿ ಗೋಪಾಲಕೃಷ್ಣ ಹೇರಳೆ, ಭಾರತೀಶ್, ಜಿಲ್ಲಾ ಕಾರ್ಯದರ್ಶಿ ಜಯಂತಿ ನಾಯಕ್, ಉಪಾಧ್ಯಕ್ಷ ಬೂಡಿಯಾರ್ ರಾಧಾಕ್ರಷ್ಣ ರೈ, ಬಿಜೆಪಿ ಹಿಂದುಳಿದ ವರ್ಗಗಳ ಜಿಲ್ಲಾ ಅಧ್ಯಕ್ಷ ಆರ್.ಸಿ.ನಾರಾಯಣ, ಬಿಜೆಪಿ ಗ್ರಾಮಾಂತರ ಮಂಡಲದ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಮುಂಗ್ಲಿಮನೆ, ಮಂಡಲ ಬಿಜೆಪಿಯ ಮಾಜಿ ಅಧ್ಯಕ್ಷರಾದ ಅಪ್ಪಯ್ಯ ಮಣಿಯಾಣಿ, ಚನಿಲ ತಿಮ್ಮಪ್ಪ ಶೆಟ್ಟಿ, ಉಪಸ್ಥಿತರಿದ್ದರು.
ಉಪ್ಪಿನಂಗಡಿ ಗ್ರಾ.ಪಂ.ಸದಸ್ಯೆ ಉಷಾಚಂದ್ರ ಮುಳಿಯ ಪ್ರಾರ್ಥಿಸಿದರು. ಬಿಜೆಪಿ ಗ್ರಾಮಾಂತರ ಮಂಡಲ ಬಿಜೆಪಿ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ ಪ್ರಾಸ್ತಾವಿಕವಅಗಿ ಮಾತನಾಡಿದರು. ನಗರ ಮಂಡಲದ ಬಿಜೆಪಿ ಅಧ್ಯಕ್ಷ ಪಿ.ಜಿ.ಜಗನ್ನಿವಾಸ ರಾವ್ ಸ್ವಾಗತಿಸಿದರು.ಬಿಜೆಪಿ ಗ್ರಾಮಾಂತರ ಮಂಡಲದ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಮುಂಗ್ಲಿಮನೆ ವಂದಿಸಿದರು. ಪ್ರಧಾನ ಕಾರ್ಯದರ್ಶಿ ನಿತೀಶ್ ಕುಮಾರ್ ಶಾಂತಿವನ ಕಾರ್ಯಕ್ರಮ ನಿರೂಪಿಸಿದರು. ಬಿಜೆಪಿ ಗ್ರಾಮಾಂತರ ಮಂಡಲದ ಉಪಾಧ್ಯಕ್ಷರಾದ ಜಯರಾಮ ಪೂಜಾರಿ ಮತ್ತು ಹರಿಪ್ರಸಾದ್ ಯಾದವ್ ಕಾರ್ಯಕ್ರಮ ನಿರ್ವಹಣೆ ಮಾಡಿದರು.
ಶಾಸಕ ಸಂಜೀವ ಮಠಂದೂರು, ಮಾಜಿ ಶಾಸಕಿ ಮಲ್ಲಿಕಾ ಪ್ರಸಾದ್, ಜಿ.ಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ತಾ.ಪಂ ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್, ನಗರಸಭೆ ಅಧ್ಯಕ್ಷ ಜೀವಂಧರ್ ಜೈನ್, ಉಪಾಧ್ಯಕ್ಷೆ ವಿದ್ಯಾ ಗೌರಿ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಭಾಮಿ ಅಶೋಕ್ ಶೆಣೈ, ವಿಭಾಗ ಪ್ರಭಾರಿ ಉದಯ ಕುಮಾರ್ ಶೆಟ್ಟಿ, ವಿಭಾಗ ಸಹಪ್ರಭಾರಿ ಗೋಪಾಲಕೃಷ್ಣ ಹೇರಳೆ, ಜಿಲ್ಲಾ ಪ್ರಭಾರಿ ಭಾರತೀಶ್, ಜಿಲ್ಲಾ ಸಹಪ್ರಭಾರಿ ರಾಜೇಶ್ ಕಾವೇರಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಮದಾಸ್ ಬಂಟ್ವಾಳ, ಸುಧೀರ್ ಶೆಟ್ಟಿ, ಕಾರ್ಯದರ್ಶಿ ಜಯಂತಿ ನಾಯಕ್, ಉಪಾಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈ, ಬಿಜೆಪಿ ಹಿಂದುಳಿದ ವರ್ಗಗಳ ಜಿಲ್ಲಾ ಅಧ್ಯಕ್ಷ ಆರ್.ಸಿ.ನಾರಾಯಣ, ಬಿಜೆಪಿ ಗ್ರಾಮಾಂತರ ಮಂಡಲದ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಮುಂಗ್ಲಿಮನೆ, ಮಂಡಲ ಬಿಜೆಪಿಯ ಮಾಜಿ ಅಧ್ಯಕ್ಷರಾದ ಅಪ್ಪಯ್ಯ ಮಣಿಯಾಣಿ, ಚನಿಲ ತಿಮ್ಮಪ್ಪ ಶೆಟ್ಟಿ, ಉಪಸ್ಥಿತರಿದ್ದರು.