ಪುತ್ತೂರು: ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘದ ವಾರ್ಷಿಕ ಮಹಾಸಭೆ ಮತ್ತು ಸನ್ಮಾನ ಕಾರ್ಯಕ್ರಮ ಜ.೨೫ರಂದು ಬೆಳಿಗ್ಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ನಡೆಯಲಿದೆ.
ಕಾರ್ಯಕ್ರಮದಲ್ಲಿ ೮೫, ೮೦ ಮತ್ತು ೭೫ ವರ್ಷ ಪೂರೈಸಿದ ಹಿರಿಯರನ್ನು ವಿವೇಕಾನಂದ ಕಾಲೇಜಿನ ವಿಶ್ರಾಂತ ಪ್ರಾಂಶುಪಾಲ ಡಾ. ಎಚ್.ಮಾಧವ ಭಟ್ ಸನ್ಮಾನಿಸಲಿದ್ದಾರೆ. ಬನ್ನೂರು ಕರ್ಮಲದಲ್ಲಿರುವ ಮಾನಸಿಕ ವಿಕಲಚೇತನರ ವೃತ್ತಿತರಬೇತಿ ಮತ್ತು ಪುನರ್ವಸತಿ ಕೇಂದ್ರವಾಗಿರುವ ಪ್ರಜ್ಞಾ ಆಶ್ರಮದ ಅಣ್ಣಪ್ಪ ಜ್ಯೋತಿ ದಂಪತಿಯನ್ನು ಸನ್ಮಾನಿಸಲಾಗುವುದು. ಇದೇ ಸಂದರ್ಭದಲ್ಲಿ ಪ್ರಜ್ಞಾ ಆಶ್ರಮಕ್ಕೆ ಕೊಡುಗೆಯನ್ನು ಹಸ್ತಾಂತರಿಸಲಾಗುವುದು ಎಂದು ಸಂಘದ ಅಧ್ಯಕ್ಷ ಬಿ.ಐತ್ತಪ್ಪ ನಾಯ್ಕ್ ತಿಳಿಸಿದ್ದಾರೆ.