ಪುತ್ತೂರು: ಕುಂಬ್ರ ಮರ್ಕಝುಲ್ ಹುದಾ ಮಹಿಳಾ ಕಾಲೇಜಿನ ಇಪ್ಪತ್ತನೆಯ ವಾರ್ಷಿಕ ಹಾಗೂ `ಅಲ್ ಮಾಹಿರಾ ಸನದುದಾನ’ ಸಂಗಮ ಫೆಬ್ರವರಿಯಲ್ಲಿ ನಡೆಯಲಿದ್ದು ಇದರ ಅಂಗವಾಗಿ ಜ.೩೦ರಂದು ಸಂಸ್ಥೆಯ ಹಳೆ ವಿದ್ಯಾರ್ಥಿನಿಯರ ಸಂಗಮ `ಆಲುಂನಿ ಅಸೆಂಬ್ಲಿ’ ನಡೆಯಲಿದೆ.
ಸಂಸ್ಥೆಯ ಅಧ್ಯಕ್ಷ ಸಯ್ಯಿದ್ ಇಸ್ಮಾಯಿಲ್ ತಂಙಳ್ ಅಧ್ಯಕ್ಷತೆ ವಹಿಸಲಿದ್ದು ಶರೀಅತ್ ಕಾಲೇಜಿನ ಪ್ರಿನ್ಸಿಪಾಲ್ ಯು.ಕೆ.ಮುಹಮ್ಮದ್ ಸಅದಿ ವಳವೂರು ಉಧ್ಘಾಟಿಸಲಿದ್ದಾರೆ. ಸಂಸ್ಥೆಯ ಪ್ರ.ಕಾರ್ಯದರ್ಶಿ ಡಾ.ಎಮ್ಮೆಸ್ಸೆಂ ಝೈನೀ ಕಾಮಿಲ್ ಅವರು ಅಲುಮ್ನೀ ಸಂದೇಶ ನೀಡಲಿದ್ದು ಮರ್ಕಝುಲ್ ಹುದಾ ಸ್ವಾಗತ ಸಮಿತಿಯ ಅಧ್ಯಕ್ಷ ಮುಹಮ್ಮದ್ ಹಾಜಿ ಕುಕ್ಕುವಳ್ಳಿ ಪ್ರಸ್ತಾವನೆಗೈಯಲಿದ್ದಾರೆ.
ಅಂತಾರಾಷ್ಟ್ರೀಯ ತರಬೇತುದಾರ ಶಹೀರ್ ಅಹ್ಮದ್ ಫಾಝಿಲ್ ಪ್ರೇರಣಾ ಭಾಷಣ ನಡೆಸಲಿದ್ದಾರೆ. ಸಂಸ್ಥೆಯ ಕಾರ್ಯಾಧ್ಯಕ್ಷ ಹಾಜಿ ಪಿ.ಎಂ.ಅಬ್ದುಲ್ ರಹ್ಮಾನ್ ಅರಿಯಡ್ಕ, ಸ್ವಾಗತ ಸಮಿತಿಯ ಕನ್ವೀನರ್ ಹಾಜಿ ಸಿ.ಎ.ಕರೀಂ ಚೆನ್ನಾರ್, ಡಿಗ್ರಿ ಕಾಲೇಜ್ ಪ್ರಿನ್ಸಿಪಾಲ್ ಮುಹಮ್ಮದ್ ಮನ್ಸೂರ್ ಕಡಬ, ಪಿ.ಯು ಕಾಲೇಜ್ ಪ್ರಿನ್ಸಿಪಾಲ್ ಸಂಧ್ಯಾ ಪಿ.ಶೆಟ್ಟಿ, ಉಪಸ್ಥಿತರಿರಲಿದ್ದಾರೆ ಎಂದು ಸಂಸ್ಥೆಯ ಪ್ರಕಟನೆಯಲ್ಲಿ ತಿಳಿಸಿದ್ದಾರೆ.