HomePage_Banner
HomePage_Banner
HomePage_Banner
HomePage_Banner

ಜ 28- ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಅರ್ಧ- ಏಕಾಹ ಭಜನೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಕಾಣಿಯೂರು: ಕುದ್ಮಾರು ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ಭಜನಾ ಮಂಡಳಿ ಮತ್ತು ಶ್ರೀ ಸುಬ್ರಹ್ಮಣ್ಯೇಶ್ವರ ನಗರ ಭಜನಾ ಸಮಿತಿ ವತಿಯಿಂದ ೧೦ನೇ ವರ್ಷದ ನಗರ ಭಜನೆಯ ಪ್ರಯುಕ್ತ ಅರ್ಧ ಏಕಾಹ ಭಜನಾ ಕಾರ್ಯಕ್ರಮವು ಕುದ್ಮಾರು ಶಾಂತಿಮೊಗರು ಶ್ರಿ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ಜ ೨೮ರಂದು ನಡೆಯಲಿದೆ. ಬೆಳಿಗ್ಗೆ ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಅರ್ಚಕ ರಮಾನಂದ ಭಟ್‌ರವರು ದೀಪ ಪ್ರಜ್ವಲಿಸಲಿದ್ದಾರೆ. ಬಳಿಕ ವಿವಿಧ ಭಜನಾ ತಂಡಗಳಿಂದ ಭಜನಾ ಕಾರ್ಯಕ್ರಮ ನಡೆದು, ಸಂಜೆ ಭಜನಾ ಮಂಗಲೋತ್ಸವ ನಡೆಯಲಿದೆ. ಬಳಿಕ ನಡೆಯುವ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಮಾಣಿಲ ಶ್ರೀ ಮಹಾಲಕ್ಷ್ಮೀ ಕ್ಷೇತ್ರ ಶ್ರೀಧಾಮದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಆಶೀರ್ವಚನ ನೀಡಲಿದ್ದು, ಶಾಂತಿಮೊಗರು ನಗರ ಭಜನಾ ಸಮಿತಿಯ ಗೌರವಾಧ್ಯಕ್ಷ ಶೂರಪ್ಪ ಗೌಡ ಪಟ್ಟೆತ್ತಾನ ಅಧ್ಯಕ್ಷತೆ ವಹಿಸಲಿದ್ದಾರೆ.

ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಸೀತಾರಾಮ ರೈ ಸವಣೂರು, ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಸತೀಶ್ ಕುಮಾರ್ ಕೆಡೆಂಜಿ, ದೇವಸ್ಥಾನದ ಅನುವಂಶೀಯ ಮೊಕ್ತೇಸರರಾದ ರಾಜ್‌ದೀಪಕ್ ಜೈನ್ ಕುದ್ಮಾರುಗುತ್ತು, ಪ್ರವೀಣ್ ಕುಮಾರ್ ಕೆಡೆಂಜಿಗುತ್ತು, ಹರೀಶ್ ಆಚಾರ್ಯ ನಗ್ರಿಗುತ್ತು, ಹರಿಣಾಕ್ಷಿ ರೈ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಶ್ರೀ ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ನಗರ ಭಜನಾ ಸಮಿತಿಯ ಅಧ್ಯಕ್ಷ ವಿಶ್ವನಾಥ ಮಡಿವಾಳ, ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ಭಜನಾ ಮಂಡಳಿಯ ಅಧ್ಯಕ್ಷ ರಮೇಶ್ ನಡುಮನೆ ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.