ಪುತ್ತೂರು: ಶಾಸಕ ಸಂಜೀವ ಮಠಂದೂರುರವರ ಅನುದಾನದಲ್ಲಿ 26 ಲಕ್ಷ ರೂ ವೆಚ್ಚದಲ್ಲಿ ನಿರ್ಮಾಣಗೊಂಡ ಕುರಿಯ ಏಳ್ನಾಡುಗುತ್ತು ತರವಾಡು ಮನೆಯ ಕಾಂಕ್ರೀಟೀಕರಣ ರಸ್ತೆಯ ಉದ್ಘಾಟನೆಯು ಜ. 26ರಂದು ಜರಗಿತು. ಶಾಸಕ ಸಂಜೀವ ಮಠಂದೂರುರವರು ಕಾಂಕ್ರೀಟ್ ರಸ್ತೆಯನ್ನು ಉದ್ಘಾಟನೆಯನ್ನು ನೇರವೇರಿಸಿದರು. ಪುತ್ತೂರು ತಾ.ಪಂ. ಸ್ಥಾಯಿ ಸಮಿತಿ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಪುತ್ತೂರು ಎಪಿಎಂಸಿ ನಿರ್ದೇಶಕ ಬೂಡಿಯಾರ್ ರಾಧಾಕೃಷ್ಣ ರೈ, ಪುತ್ತೂರು ಅರೇಕ ಮಾರ್ಚೇಂಟ್ ಅಸೋಸಿಯೇಶನ್ ಅಧ್ಯಕ್ಷ ಕೆ.ಎಸ್.ರವೀಂದ್ರನಾಥ ರೈ ಬಳ್ಳಮಜಲುಗುತ್ತು ಸಹಿತ ಅನೇಕ ಮಂದಿ ಉಪಸ್ಥಿತರಿದ್ದರು.
ಕುರಿಯ ಮಾಡಾವು ಏಳ್ನಾಡುಗುತ್ತು ತರವಾಡು ಮನೆಯ ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ರಾಧಾಕೃಷ್ಣ ರೈ ಕುರಿಯ ಏಳ್ನಾಡುಗುತ್ತು, ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಎಸ್.ಬಿ.ಜಯರಾಮ ರೈ ಬಳೆಜ್ಜ ಹಾಗೂ ತರವಾಡು ಮನೆಯ ಕುಟುಂಬಸ್ಥರುಗಳು ಶಾಸಕರು ಹಾಗೂ ಅತಿಥಿಗಳನ್ನು ಸ್ವಾಗತಿಸಿ, ಗೌರವಿಸಿದರು.