ಪುತ್ತೂರು; ಗ್ರಾಮ ಪಂಚಾಯತ್ಗಳಿಗೆ ಚುನಾವಣೆ ನಡೆದು ಮೊದಲ ೩೦ ತಿಂಗಳ ಅವಧಿಗೆ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಗೆ ಮೀಸಲಾತಿ ನಿಗಧಿಪಡಿಸುವ ಪ್ರಕ್ರಿಯೆಯು ಪುತ್ತೂರು ಪುರಭವನದಲ್ಲಿ ಜ.೨೭ ಹಾಗೂ ೨೮ ನಡೆಯಲಿದ್ದು ಮೊದಲ ದಿನವಾದ ಜ.೨೭ರಂದು ಮೊದಲ ದಿನ ಬೆಳ್ತಂಗಡಿ ತಾಲೂಕಿನ ಗ್ರಾಮ ಪಂಚಾಯತ್ಗಳಿಗೆ ಸಂಬಂಧಿಸಿ ಮೀಸಲಾತಿ ನಿಗದಿಗೊಳಿಸುವ ಪ್ರಕ್ರಿಯೆಯು ನಡೆದಿದೆ.
ದ.ಕ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿಯವರ ನೇತೃತ್ವದಲ್ಲಿ ಅಧ್ಯಕ್ಷ, ಉಪಾಧ್ಯಕ್ಷ ಆಯ್ಕೆ ಮೀಸಲಾತಿ ಪ್ರಕ್ರಿಯೆಯು ನಡೆಯಿತು. ಪೂರ್ವಾಹ್ನ ಬೆಳ್ತಂಗಡಿ ತಾಲೂಕಿನ ಗ್ರಾಮ ಪಂಚಾಯತ್ಗಳಿಗೆ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಗೆ ಮೀಸಲಾತಿ ನಿಗಧಿಗೊಳಿಸುವ ಪ್ರಕ್ರಿಯೆಯು ಪೂರ್ಣಗೊಂಡು ಅಪರಾಹ್ನ ಸುಳ್ಯ ತಾಲೂಕಿನ ಗ್ರಾಮ ಪಂಚಾಯತ್ಗಳಿಗೆ ಮೀಸಲಾತಿ ಪ್ರಕ್ರಿಯೆ ನಡೆಯಲಿದೆ.
ಅಪರ ಜಿಲ್ಲಾಧಿಕಾರಿ ರೂಪಾ, ಸಹಾಯಕ ಆಯುಕ್ತ ಯತೀಶ್ ಉಳ್ಳಾಲ್, ತಹಶೀಲ್ದಾರ್ ರಮೇಶ್ ಬಾಬು ಉಪಸ್ಥಿತರಿದ್ದರು. ಜ.೨೮ ಕಡಬ, ಪುತ್ತೂರು ಕಡಬ ಹಾಗೂ ಪುತ್ತೂರು ತಾಲೂಕಿನ ಗ್ರಾಮ ಪಂಚಾಯತ್ಗಳ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಗೆ ಮೀಸಲಾತಿ ನಿಗಧಿಗೊಳಿಸುವ ಪ್ರಕ್ರಿಯೆಯು ಜ.೨೮ರಂದು ಪುರಭವನದಲ್ಲಿ ನಡೆಯಲಿದೆ. ಕಡಬ ತಾಲೂಕು ಬೆಳಿಗ್ಗೆ೧೦.೩೦ ಹಾಗೂ ಪುತ್ತೂರಿಗೆ ಅಪರಾಹ್ನ ೩ ಗಂಟೆಗೆ ನಡೆಯಲಿದೆ.