HomePage_Banner
HomePage_Banner
HomePage_Banner
HomePage_Banner

ಉಪ್ಪಿನಂಗಡಿ: ಡಿವೈಡರ್‌ಗೆ ಬೈಕ್ ಡಿಕ್ಕಿ – ಹಳೆನೇರೆಂಕಿ ನಿವಾಸಿ ಯುವಕ ಕಿಶೋರ್ ದುರ್ಮರಣ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ರಾಮಕುಂಜ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ೭೫ರ ಉಪ್ಪಿನಂಗಡಿಯಲ್ಲಿ ಬೈಕ್ ಡಿವೈಡರ್‌ಗೆ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ, ಹಳೆನೇರೆಂಕಿ ಗ್ರಾಮದ ಕಲ್ಲೇರಿ ನಿವಾಸಿಯೋರ್ವ ಮೃತಪಟ್ಟ ದಾರುಣ ಘಟನೆ ಜ.೨೬ರಂದು ರಾತ್ರಿ ನಡೆದಿದೆ.

ಹಳೆನೇರೆಂಕಿ ಗ್ರಾಮದ ಕಲ್ಲೇರಿ ದಿ.ವೆಂಕಟೇಶ್ ಹಾಗೂ ರತ್ನ ದಂಪತಿ ಪುತ್ರ ಕಿಶೋರ್(೨೯ವ.)ಮೃತಪಟ್ಟ ದುರ್ದೈವಿಯಾಗಿದ್ದಾರೆ. ಕಿಶೋರ್‌ರವರು ಮಂಗಳೂರಿನ ತೊಕ್ಕೊಟ್ಟಿನಲ್ಲಿ ಪ್ರಿಂಟಿಂಗ್ ಪ್ರೆಸ್‌ವೊಂದರಲ್ಲಿ ಉದ್ಯೋಗಿಯಾಗಿದ್ದು ಜ.೨೬ರಂದು ರಾತ್ರಿ ಕೆಲಸ ಮುಗಿಸಿಕೊಂಡು ಬೈಕ್‌ನಲ್ಲಿ ಮನೆಗೆ ಬರುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಬೈಕ್ ಉಪ್ಪಿನಂಗಡಿಯಲ್ಲಿ ಡಿವೈಡರ್‌ಗೆ ಡಿಕ್ಕಿಯಾಗಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಕಿಶೋರ್‌ರವರನ್ನು ಸ್ಥಳೀಯ ರಿಕ್ಷಾ ಚಾಲಕ ಹಾಗೂ ಇನ್ನಿಬ್ಬರು ಪುತ್ತೂರಿನ ಸಿಟಿ ಆಸ್ಪತ್ರೆಗೆ ಕರೆತಂದಿದ್ದು ಅಲ್ಲಿಂದ ಪುತ್ತೂರು ಸರಕಾರಿ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಂತೆ ಅವರು ಮೃತಪಟ್ಟರು ಎಂದು ತಿಳಿದುಬಂದಿದೆ. ಮೃತ ಕಿಶೋರ್‌ರವರು ತಾಯಿ ಹಾಗೂ ಇಬ್ಬರು ಸಹೋದರಿಯರನ್ನು ಅಗಲಿದ್ದಾರೆ. 

ಮೂರು ವಾರದ ಹಿಂದೆಯಷ್ಟೇ ವಿವಾಹವಾಗಿದ್ದ ಯವಕ
ಮೃತ ಕಿಶೋರ್‌ರವರಿಗೆ ಮೂರು ವಾರದ ಹಿಂದೆ ಕಾರ್ಕಳದ ಯುವತಿಯೋರ್ವರ ಜೊತೆಗೆ ವಿವಾಹವಾಗಿತ್ತು. ಆ ಬಳಿಕ ಅವರು ಪ್ರತಿದಿನ ರಾತ್ರಿ ಮನೆಗೆ ಬಂದು ಬೆಳಿಗ್ಗೆ ಕೆಲಸಕ್ಕೆ ಹೋಗುತ್ತಿದ್ದರು. ಕಿಶೋರ್‌ರವರ ಕುತ್ತಿಗೆಯಲ್ಲಿದ್ದ ಸುಮಾರು 4 ಪವನ್ ಅಂದಾಜಿನ ಚಿನ್ನದ ಸರ ನಾಪತ್ತೆಯಾಗಿರುವುದಾಗಿ ಅವರ ಸಂಬಂಧಿಕರು ಮಾಹಿತಿ ನೀಡಿದ್ದಾರೆ.

Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.