HomePage_Banner
HomePage_Banner
HomePage_Banner
HomePage_Banner

ಜ.30: ಉಪ್ಪಿನಂಗಡಿಗೆ ರೋಟರಿ ಗವರ್ನರ್ ರಂಗನಾಥ್ ಭೇಟಿ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
  • ಸಮುದಾಯಕ್ಕೆ ಯೋಜನೆಗಳ ಸಮರ್ಪಣೆ
  • ಸಾಧಕರಿಗೆ ಸನ್ಮಾನ

ಉಪ್ಪಿನಂಗಡಿ: ರೋಟರಿ ಕ್ಲಬ್ ಜಿಲ್ಲಾ ಗವರ್ನರ್, ಮೇಜರ್ ಡೋನರ್ ಎಂ. ರಂಗನಾಥ್ ಭಟ್ ಜ. ೩೦ರಂದು ಉಪ್ಪಿನಂಗಡಿ ರೋಟರಿ ಕ್ಲಬ್‌ಗೆ ಅಧಿಕೃತ ಭೇಟಿ ನೀಡಿ ಸಮುದಾಯಕ್ಕೆ ಹಲವು ಯೋಜನೆಗಳ ಸಮರ್ಪಣೆ ಮಾಡಲಿದ್ದಾರೆ ಎಂದು ಉಪ್ಪಿನಂಗಡಿ ರೋಟರಿ ಕ್ಲಬ್ ಅಧ್ಯಕ್ಷ ರವೀಂದ್ರ ದರ್ಬೆ ತಿಳಿಸಿದ್ದಾರೆ.

ಉಪ್ಪಿನಂಗಡಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಸರ್ಕಾರಿ ಶಾಲೆಯಲ್ಲಿ ಕಲಿಯುತ್ತಿರುವ ೧೦ನೇ ತರಗತಿ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ೪ ಟ್ಯಾಬ್, ಹಿರೇಬಂಡಾಡಿ ಸರ್ಕಾರಿ ಪ್ರಾಥಮಿಕ ಶಾಲೆಗೆ ಭಾಷಣದ ಪೀಠ, ೫ ಶಾಲೆಗಳಿಗೆ ಸ್ಯಾನಿಟೈಸರ್ ಸ್ಟ್ಯಾಂಡ್ ವಿತರಣೆ ಹಾಗೂ ೨ ವಿದ್ಯಾ ಸಂಸ್ಥೆಯಲ್ಲಿ ಇಂಟರ್‍ಯಾಕ್ಟ್ ಕ್ಲಬ್‌ಗಳ ಉದ್ಘಾಟನೆ ಮತ್ತು ಈರ್ವರು ಸಾಧಕರಿಗೆ ಸನ್ಮಾನ ಮೊದಲಾದ ಕಾರ್‍ಯಕ್ರಮಗಳು ಇರುವುದಾಗಿ ಅವರು ತಿಳಿಸಿದರು.

ಸಮಾರಂಭದಲ್ಲಿ ಸಹಾಯಕ ಗವರ್ನರ್, ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ರೋಟರಿ ಪಿ.ಹೆಚ್.ಎಫ್. ಯತಿಕುಮಾರ ಸ್ವಾಮಿ ಹಾಗೂ ವಲಯ ಸೇನಾನಿ ಜರೋಮಿಯಸ್ ಪಾಯಸ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದು ಉಪ್ಪಿನಂಗಡಿ ರೋಟರಿ ಕ್ಲಬ್ ಅಧ್ಯಕ್ಷ ರವೀಂದ್ರ ದರ್ಬೆ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಉಪ್ಪಿನಂಗಡಿ ರೋಟರಿ ಕ್ಲಬ್ ಕಾರ್‍ಯದರ್ಶಿ ಜಗದೀಶ್ ನಾಯಕ್, ಕೋಶಾಧಿಕಾರಿ ಅಬ್ದುಲ್ ರಹಿಮಾನ್ ಯುನಿಕ್, ನಿಕಟಪೂರ್ವ ಅಧ್ಯಕ್ಷ ಚಂದಪ್ಪ ಮೂಲ್ಯ ಉಪಸ್ಥಿತರಿದ್ದರು.

Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.