ಪುತ್ತೂರು: ಗ್ಯಾಸ್ ಟ್ಯಾಂಕರೊಂದು ಪಲ್ಟಿಯಾದ ಪರಿಣಾಮ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ಥಗೊಂಡ ಘಟನೆ ಶಿರಾಡಿ ಸಮೀಪದ ಕೆಂಪುಹೊಳೆ ಎಂಬಲ್ಲಿ ಫೆ.5ರಂದು ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲಿ ಮಗುಚಿ ಬಿದ್ದ ಟ್ಯಾಂಕರ್ ನಿಂದ ಅನಿಲ ಸೋರಿಕೆಯಾಗುತ್ತಿದ್ದು, ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಹಾಗೂ ಪೊಲೀಸರು ಭೇಟಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.
ಹೆದ್ದಾರಿಯಲ್ಲಿ ಯಾವುದೇ ವಾಹನಗಳಿಗೆ ಸಂಚಾರಕ್ಕೆ ಅವಕಾಶ ನೀಡಿಲ್ಲ. ಬೆಂಗಳೂರಿಗೆ ತೆರಳುವವರನ್ನು ಪರ್ಯಾಯವಾಗಿ ಮಾಣಿಯಿಂದಲ್ಲೇ ಪುತ್ತೂರು- ಮೈಸೂರು ರಸ್ತೆಯಲ್ಲಿ ಕಳುಹಿಸಿಕೊಡಲಾಗುತ್ತಿದೆ ಎಂದು ತಿಳಿದುಬಂದಿದೆ.