HomePage_Banner
HomePage_Banner
HomePage_Banner
HomePage_Banner

ಡೆತ್‌ನೋಟ್ ಬರೆದಿಟ್ಟು ಬಂಟ್ವಾಳ ಕೆಎಸ್‌ಆರ್‌ಟಿಸಿ ಘಟಕದ ನಿರ್ವಾಹಕ, ರಾಮಕುಂಜ ನಿವಾಸಿ ಬಾಲಕೃಷ್ಣ ದೇವಾಡಿಗ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1


ರಾಮಕುಂಜ: ಕೆಎಸ್‌ಆರ್‌ಟಿಸಿ ಬಂಟ್ವಾಳ ಘಟಕದಲ್ಲಿ ಚಾಲಕ ಕಂ ನಿರ್ವಾಹಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮೂಲತ: ರಾಮಕುಂಜ ನಿವಾಸಿಯಾಗಿರುವ ಬಾಲಕೃಷ್ಣ ದೇವಾಡಿಗ(೪೦ವ.)ಎಂಬವರು ಡೆತ್‌ನೋಟ್ ಬರೆದಿಟ್ಟು ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಫೆ.೧೦ರಂದು ಸಂಜೆ ನಡೆದಿದೆ.

ರಾಮಕುಂಜ ಗ್ರಾಮದ ಬಾಂತೊಟ್ಟು ದಿ.ಲಿಂಗಪ್ಪ ದೇವಾಡಿಗರವರ ಪುತ್ರರಾದ ಬಾಲಕೃಷ್ಣ ದೇವಾಡಿಗ(೪೦ವ.)ಆತ್ಮಹತ್ಯೆ ಮಾಡಿಕೊಂಡವರಾಗಿದ್ದಾರೆ. ಬಾಲಕೃಷ್ಣ ದೇವಾಡಿಗರವರು ಕಳೆದ ಹಲವು ವರ್ಷಗಳಿಂದ ಕೆಎಸ್‌ಆರ್‌ಟಿಸಿ ಬಂಟ್ವಾಳ ಘಟಕದಲ್ಲಿ ಚಾಲಕ ಕಂ ನಿವಾರ್ಹಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಬಿ.ಸಿ.ರೋಡ್‌ನಲ್ಲಿಯೇ ಬಾಡಿಗೆ ಮನೆಯೊಂದರಲ್ಲಿ ಪತ್ನಿ ಹಾಗೂ ಮಕ್ಕಳ ಜೊತೆಗೆ ವಾಸವಾಗಿದ್ದ ಇವರು ರಾಮಕುಂಜದಲ್ಲಿರುವ ಮನೆಗೂ ಬಂದು ಹೋಗುತ್ತಿದ್ದರು. ಕೊರೋನಾ ಬಳಿಕ ಕೆಎಸ್‌ಆರ್‌ಟಿಸಿ ಬಂಟ್ವಾಳ ಘಟಕದ ಭದ್ರತಾ ಸಿಬ್ಬಂದಿಯಾಗಿ ಕೆಲಸ ನಿರ್ವಹಿಸುತ್ತಿದ್ದರು. ಫೆ.೯ರಂದು ರಾತ್ರಿ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸಿದ್ದ ಇವರು ಫೆ.೧೦ರ ಮುಂಜಾನೆ ತನಕವೂ ಕೆಲಸ ನಿರ್ವಹಿಸಿದ್ದರು. ಮಧ್ಯಾಹ್ನ ವೇಳೆಗೆ ಮಂಗಳೂರು ಹೊರವಲಯದ ತೊಕ್ಕೊಟ್ಟು ರೈಲ್ವೇ ಸೇತುವೆಯಿಂದ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು ಸಂಜೆ ವೇಳೆಗೆ ಮೃತದೇಹ ಪತ್ತೆಯಾಗಿದೆ ಎಂದು ವರದಿಯಾಗಿದೆ. ಬಾಲಕೃಷ್ಣರವರ ಮೃತದೇಹವನ್ನು ನೀರಿನಿಂದ ಮೇಲಕ್ಕೆತ್ತಲಾಗಿದ್ದು ಮಂಗಳೂರಿನ ವೆನ್‌ಲಾಕ್ ಶವಾಗಾರದಲ್ಲಿಡಲಾಗಿದೆ ಎಂದು ತಿಳಿದುಬಂದಿದೆ.

ಡೆತ್‌ನೋಟ್ ಪತ್ತೆ:
ಇವರು ಆತ್ಮಹತ್ಯೆಗೆ ಮೊದಲು ಡೆತ್‌ನೋಟ್ ಬರೆದಿಟ್ಟು ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಡೆತ್‌ನೋಟ್‌ನಲ್ಲಿ ತನ್ನ ಸಹೋದರ ಮತ್ತು ಸಂಸ್ಥೆಯ ವಿರುದ್ಧ ಅಸಮಾಧಾನ ತೋರಿಸಿದ್ದಾರೆ. ಕೆಎಸ್‌ಆರ್‌ಟಿಸಿ ಸಂಸ್ಥೆಯಲ್ಲಿ ನಿರಂತರ ಕಿರುಕುಳ ನೀಡುತ್ತಿರುವ ಬಗ್ಗೆ ಉಲ್ಲೇಖಿಸಿದ್ದಾರೆ. ಸಂಸ್ಥೆ ತನ್ನನ್ನು ಬದುಕಲು ಬಿಡುತ್ತಿಲ್ಲ. ಅಧಿಕಾರಿಗಳು ನಿರಂತರ ಕಿರುಕುಳ ನೀಡುತ್ತಿದ್ದಾರೆ ಎಂದು ಉಲ್ಲೇಖಿಸಿದ್ದು, ನನ್ನ ಮಕ್ಕಳು ಹಾಗೂ ತಾಯಿಯನ್ನು ಒಳ್ಳೆಯ ರೀತಿಯಲ್ಲಿ ನೋಡಿಕೊಳ್ಳಿ ಎಂದು ಡೆತ್‌ನೋಟ್‌ನಲ್ಲಿ ಬರೆದಿದ್ದಾರೆ ಎಂದು ವರದಿಯಾಗಿದೆ. ಮೃತರು ತಾಯಿ ಲೀಲಾವತಿ, ಸಹೋದರ ಅಶೋಕ ಹಾಗೂ ಸಹೋದರಿಯರನ್ನು ಅಗಲಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.