ಪುತ್ತೂರು; ನೆಕ್ಕಿಲಾಡಿ ಗ್ರಾಮ ಪಂಚಾಯತ್ ನ ಪ್ರಥಮ ಹಂತದ 30 ತಿಂಗಳ ಅವಧಿಗೆ ಅಧ್ಯಕ್ಷರಾಗಿ ಪ್ರಶಾಂತ್ ಹಾಗೂ ಉಪಾಧ್ಯಕ್ಷರಾಗಿ ಸ್ವಪ್ನರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಫೆ.12ರಂದು ನಡೆದ ಆಯ್ಕೆ ಪ್ರಕ್ರಿಯೆಲ್ಲಿ ಆಯ್ಕೆಯಾಗಿದ್ದಾರೆ. ಹಿಂದುಳಿದ ವರ್ಗ ಎ ಗೆ ಮೀಸಲಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಪ್ರಶಾಂತ್ ಹಾಗೂ ಸಾಮಾನ್ಯ ಮಹಿಳೆಗೆ ಮೀಸಲಾದ ಉಪಾಧ್ಯಕ್ಷ ಸ್ಥಾನಕ್ಕೆ ಸ್ವಪ್ನರವರು ಮಾತ್ರ ನಾಮಪತ್ರಸಿದ್ದು ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದ ಪ್ರಶಾಂತ್ ರವರಿಗೆ ಗೀತಾ ಸೂಚಕವಾಗಿದ್ದರು. ಉಪಾಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದ ಸ್ವಪ್ನರವರಿಗೆ ವಿಜಯ ಕುಮಾರ್ ಸೂಚಕರಾಗಿದ್ದರು.
ಒಟ್ಟು 11 ಸ್ಥಾನಗಳನ್ನು ಹೊಂದಿರುವ ಪಂಚಾಯತ್ ನಲ್ಲಿ ಎಲ್ಲಾ ಸ್ಥಾನಗಳಲ್ಲಿಯೂ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಚುನಾಯಿತರಾಗಿದ್ದರು. ತಾ.ಪಂ ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ ಚುನಾವಣಾಧಿಕಾರಿಯಾಗಿದ್ದರು. ಪ್ರಭಾರ ಪಿಡಿಓ ಕುಮಾರಯ್ಯ ಹಾಗೂ ಸಿಬಂದಿಗಳು ಸಹಕರಿಸಿದರು.
ಹರೀಶ್ ಡಿ., ವೇದಾವತಿ, ತುಳಸಿ, ಹರೀಶ ಕೆ., ಕೆ.ರಮೇಶ ನಾಯ್ಕ, ಆರ್.ಸುಜಾತ ರೈ, ಎ.ರತ್ನಾವತಿ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಿದ್ದರು.