HomePage_Banner
HomePage_Banner
HomePage_Banner
HomePage_Banner

ನಾಳೆಯಿಂದ (ಫೆ.14) ವೀರಮಂಗಲ ವಿಷ್ಣುಮೂರ್ತಿ ದೇವಸ್ಥಾನದ ಜಾತ್ರೋತ್ಸವ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಶಾಂತಿಗೋಡು ಗ್ರಾಮದ ವೀರಮಂಗಳ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ ಫೆ.14ರಿಂದ ಫೆ.16ರ ತನಕ ವಿವಿಧ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.

ಪುತ್ತೂರಿನಿಂದ ಸುಮಾರು ೧೩ ಕಿ.ಮೀ ದೂರದಲ್ಲಿರುವ ವೀರಮಂಗಲ ಕ್ಷೇತ್ರವು ಪ್ರಾಚೀನ ಕಾಲದಲ್ಲಿ ನಿತ್ಯಮಂಗಲ ಎಂಬ ಹೆಸರನ್ನು ಪಡೆದಿತ್ತು. ತದನಂತರ ಬಲ್ಲಾಳ ಮನೆತನದ ವೀರಮ್ಮ ಬಳ್ಳಾಲ್ತಿಯ ಶೌರ್ಯದ ಪ್ರತೀಕವಾಗಿ ವೀರಮಂಗಲವಾಯಿತೆಂಬ ಇತಿಹಾಸವಿದೆ. ಈ ಊರಿನ ಭಕ್ತರ ಪ್ರತೀಕವಾಗಿ ಪುಣ್ಯವಾಹಿನಿ ಕುಮಾರಧಾರ ನದಿ ತಟದಲ್ಲಿ ಕಂಗೊಳಿಸುವ ಪವಿತ್ರ ಕ್ಷೇತ್ರವಾಗಿದೆ. ಪುತ್ತೂರು ಮಹಾಲಿಂಗೇಶ್ವರ ದೇವರ ಅವಭೃತ ಸ್ನಾನಕ್ಕೆ ತೆರಳುವ ಸಂದರ್ಭದಲ್ಲಿ ವೀರಮಂಗಲ ಶ್ರೀ ವಿಷ್ಣುಮೂರ್ತಿ ದೇವರನ್ನು ಭೇಟಿಯಾಗಿ ಕುಮಾರಧಾರ ನದಿಯಲ್ಲಿ ಅವಭೃತ ಸ್ನಾನ ನಡೆಸುವುದು ಇಲ್ಲಿನ ಪುರಾತನ ಸಂಪ್ರದಾಯವಾಗಿದೆ. ಹರಿಹರರು ಒಂದಾಗಿ ಭಕ್ತರನ್ನು ಹರಸುವ ಪುಣ್ಯಕ್ಷೇತ್ರವಾಗಿದ್ದ ಈ ವೀರಮಂಗಲದ ಪುಣ್ಯಭೂಮಿ. ಕೆಮ್ಮಿಂಜೆ ಬ್ರಹ್ಮಶ್ರೀ ನಾಗೇಶ ತಂತ್ರಿಯವರ ಹಿರಿತನದಲ್ಲಿ ನಡೆಯುವ ಜಾತ್ರೋತ್ಸವದಲ್ಲಿ ಫೆ.೧೪ರಂದು ರಾತ್ರಿ ಶ್ರೀದೇವರಿಗೆ ರಂಗಪೂಜೆ, ಫೆ.೧೫ ರಂದು ಪೂರ್ವಾಹ್ನ ಗಣಹೋಮ, ಸೀಯಾಳಾಭಿಷೇಕ, ಪವಮಾನಾಭಿಷೇಕ, ನವಕ ಕಲಶಾಭಿಷೇಕ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆದು ಸಂಜೆ ದೈವಗಳ ಭಂಡಾರ ತೆಗೆಯುವುದು, ಭಜನಾ ಕಾರ್ಯಕ್ರಮ ನಡೆಯಲಿದೆ. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಸಂಜೆ ಶ್ರೀಕೃಷ್ಣ ಕಲಾ ಕೇಂದ್ರ ವೀರಮಂಗಲ ಇವರಿಂದ ವಿದ್ವಾನ್ ಗೋಪಾಲಕೃಷ್ಣ ವೀರಮಂಗಲ ರಚಿಸಿ, ನಿರ್ದೇಶಿಸಿರುವ `ಏಳ್ ಸತ್ಯೊಲು’ (ಸಪ್ತ ಮಾತೃಕೆಯರು) ಎಂಬ ತುಳು ನೃತ್ಯ ರೂಪಕ ನಡೆಯಲಿದೆ. ರಾತ್ರಿ ದೇವರ ಉತ್ಸವ, ದರ್ಶನ ಬಲಿ, ಬಟ್ಟಲು ಕಾಕೆ, ಅನ್ನಸಂತರ್ಪಣೆ, ಉಳ್ಳಾಕುಲು, ಹುಲಿಭೂತ, ಕೊಡಮತ್ತಾಯ, ಅಂಙಣ ಪಂಜುರ್ಲಿ ದೈವಗಳ ನೇಮ ನಡೆಯಲಿದೆ. ಫೆ.೧೬ರಂದು ಬೆಳಿಗ್ಗೆ ಶ್ರೀರಕ್ತೇಶ್ವರಿ, ಶಿರಾಡಿ ರಾಜನ್ ದೈವ, ಗುಳಿಗ ದೈವಗಳ ನೇಮೋತ್ಸವ ನಡೆಯಲಿದೆ.

ಫೆ.೨೪ ದೊಂಪದ ಬಲಿ: ಫೆ.೨೩ರಂದು ರಾತ್ರಿ ಭಂಡಾರ ತೆಗೆದು ಫೆ.೨೪ರಂದು ಬೆಳಿಗ್ಗೆ ವೀರಮಂಗಳ ಶ್ರೀ ಶಿರಾಡಿ ರಾಜನ್ ದೈವದ ದೊಂಪದ ಬಲಿ ನೇಮೋತ್ಸವ ನಡೆಯಲಿದೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಶಿವರಾಮ ಭಟ್ ಬಾವ, ವಿಶ್ವಸ್ಥ ಮಂಡಳಿ ಅಂಧ್ಯಕ್ಷ ಉಮೇಶ್ ಕೋಡಿಬೈಲು ಹಾಗೂ ಅರ್ಚಕ ರಾಧಾಕೃಷ್ಣ ಶಗ್ರಿತ್ತಾಯ ಹಾಗೂ ಸದಸ್ಯರು ಪ್ರಕಟಣೆಯಲ್ಲಿ ತಿಳಿಸಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.