ಕಡಬ: ನೂಜಿಬಾಳ್ತಿಲ ಗ್ರಾಮದ ಬದಿಬಾಗಿಲು ಶ್ರೀ ಹುಲಿಚಾಮುಂಡಿ(ಪಿಲಿಚಂಡಿ) ಹಾಗೂ ಪರಿವಾರ ದೈವಗಳ ದೈವಸ್ಥಾನದ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವವು ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ವೈಧಿಕ, ಧಾರ್ಮಿಕ ಕಾರ್ಯಕ್ರಮಗಳು ನಡೆಯಿತು.
ಫೆ.15ರಂದು ಬೆಳಗ್ಗೆ ಮಹಾ ಗಣಪತಿ ಹೋಮ, ಬ್ರಹ್ಮಕಲಶ ಪೂಜೆ ಪ್ರತಿಷ್ಠೆ, ಮೀನ ಲಗ್ನ ಶುಭಮುಹೂರ್ತದಲ್ಲಿ ಶ್ರೀ ಹುಲಿಚಾಮುಂಡಿ(ಪಿಲಿಚಂಡಿ) ಹಾಗೂ ಪರಿವಾರ ದೈವಗಳ ಪ್ರತಿಷ್ಠೆ, ಬ್ರಹ್ಮಕಲಶಾಭಿಷೇಕ ನಡೆಯಿತು. ಬಳಿಕ ತಂಬಿಲ ಸೇವೆ, ಮಂಗಳಾರತಿ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು..
ಇಂದು ಸಂಜೆ ನೇಮೋತ್ಸವ
ಸಂಜೆ ದೈವಗಳ ಭಂಡಾರ ಹಿಡಿದು, ಶ್ರೀ ಹುಲಿಚಾಮುಂಡಿ(ಪಿಲಿಚಂಡಿ) ಹಾಗೂ ಪರಿವಾರ ದೈವಗಳ ನೇಮೋತ್ಸವ ನಡೆದು, ಅನ್ನಸಂತರ್ಪಣೆ ನಡೆಯಲಿದೆ.